ಕನ್ನಡಪರ ಹೋರಾಟಗಾರರ ಎಲ್ಲ ಕೇಸ್ ವಾಪಸ್: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು :ಕನ್ನಡಪರ ಹೋರಾಟಗಾರರ ಎಲ್ಲ ಕೇಸ್ ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

- Advertisement -

ವಿಧಾನಸೌಧದ ಆವರಣದಲ್ಲಿ ಇಂದು ಸಂಜೆ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಅವರು, ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಕರೆ ನೀಡಿದರು. ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ, ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವ ಆರಂಭಿಸಿ ಇಡೀ ವರ್ಷ ಆಚರಿಸಲು ನಿರ್ಧರಿಸಿದೆವು. ಕನ್ನಡ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಇದು ನಮ್ಮ ಬದ್ಧತೆ ಎಂದು ಸ್ಪಷ್ಟಪಡಿಸಿದರು.

ಕನ್ನಡ ಭಾಷೆ, ಸಂಸ್ಕೃತಿ, ಕಲೆಯ ಬಗ್ಗೆ ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮ‌ ಭಾಷೆಯಾಗುತ್ತದೆ ಎಂದರು.

- Advertisement -

ನಾವು ನಮ್ಮ ಸಹೋದರ ಮತ್ತು ಇತರ ಭಾಷಿಕರ ಜೊತೆ ಕನ್ನಡದಲ್ಲಿ ಮಾತನಾಡುವ, ವ್ಯವಹರಿಸುವ ಸಂಸ್ಕೃತಿಯನ್ನು ಪಾಲಿಸಬೇಕು ಎಂದು ಕರೆ ನೀಡಿದರು. ಇತರ ಭಾಷೆಯಲ್ಲಿ ತಪ್ಪು ತಪ್ಪಾಗಿ ಮಾತನಾಡುವುದಕ್ಕಿಂತ ನಮ್ಮದೇ ಭಾಷೆಯಲ್ಲಿ ಮಾತಾಡಬೇಕು. ಅಕ್ಕ ಪಕ್ಕದ ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಜನರಾಡುವ ಭಾಷೆಯೇ ಸಾರ್ವಭೌಮ. ನಮ್ಮಲ್ಲೂ ಇದನ್ನೇ ಆಚರಿಸಬೇಕು ಎಂದು ಕರೆ ನೀಡಿದರು.



Join Whatsapp