ನವದೆಹಲಿ: ನಮ್ಮನ್ನು ರಸ್ತೆಯಲ್ಲಿ ಎಳೆದಾಡಿದಾಗ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳು ನಮ್ಮೊಂದಿಗೆ ನಿಂತಿದ್ದವು ಎಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬಳಿಕ ವಿನೇಶ್ ಫೋಗಟ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಹೋರಾಡಲು ಸಿದ್ಧವಾಗಿರುವ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಹೆಮ್ಮೆಯ ಸಂಗತಿ. “ನಮ್ಮ ಕುಸ್ತಿ ಪಯಣದಲ್ಲಿ ನಮ್ಮನ್ನು ಬೆಂಬಲಿಸಿದ್ದಕ್ಕಾಗಿ ನಾನು ದೇಶದ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ, ನಾನು ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ನಾವು ರಸ್ತೆಗಳಲ್ಲಿ ಎಳೆದಾಡಿದಾಗ, ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳು ನಮ್ಮೊಂದಿಗಿದ್ದವು, ಅವರು ನಮ್ಮ ನೋವನ್ನು ಅರ್ಥಮಾಡಿಕೊಂಡರು, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಹೋರಾಡಲು ನಾನು ಸಿದ್ಧವಾಗಿರುವ ಪಕ್ಷಕ್ಕೆ ನಾನು ಸೇರ್ಪಡೆಯಾಗುತ್ತಿರುವುದಕ್ಕೆ ನನಗೆ ಹೆಮ್ಮೆಯಾಗುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಬಜರಂಗ್ ಪುನಿಯಾ, ಒಲಿಂಪಿಕ್ಸ್ ಪಯಣದಲ್ಲಿ ಎಲ್ಲರೂ ವಿನೇಶ್ ಅವರನ್ನು ಬೆಂಬಲಿಸಿದ್ದಾರೆ. ಆದರೆ ಕೆಲವು ಐಟಿ ಸೆಲ್ಗಳು ಆಕೆಯನ್ನು ಅನರ್ಹಗೊಳಿಸಿದಾಗ ಸಂಭ್ರಮಿಸಿದ್ದವು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸೇರ್ಪಡೆಯಾಗಿ ದೇಶದ ಮಹಿಳೆಯರಿಗಾಗಿ, ಪಕ್ಷಕ್ಕಾಗಿ ಮತ್ತು ತಳಮಟ್ಟದ ಜನರಿಗೆ ಸಹಾಯ ಮಾಡಲು ಶ್ರಮಿಸುತ್ತೇನೆ ಎಂದು ಬಜರಂಗ್ ಪುನಿಯಾ ಹೇಳಿದ್ದಾರೆ.