ಕರ್ನಾಟಕ ರಾಜ್ಯಪಾಲರು ಇಂದು ರಾಜಭವನದಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದ್ದು, ರಾಜ್ಯದಲ್ಲಿ ಏರುತ್ತಿರುವ ಕೋವಿಡ್ ಕೊರೋನಾ ಪರಿಸ್ಥಿತಿ,ಕೊರೋನಾ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳು,ರೋಗಿಗಳಿಗೆ ಬೆಡ್ ಹಂಚಿಕೆ, ಆ್ಯಂಬುಲೆನ್ಸ್ ,ಅಗತ್ಯ ಔಷಧಿ, ಲಸಿಕೆ ಕಾರ್ಯಕ್ರಮದ ಪ್ರಗತಿ,ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದೆಂದು ತಿಳಿಯಲಾಗಿದೆ.
ಇಂದು ಸಂಜೆ ರಾಜ್ಯಪಾಲರ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ನಡೆಯಲಿದೆ. ಸಭೆಯಲ್ಲಿ ಮುಖ್ಯಮಂತ್ರಿ, ಸರ್ಕಾರದ ಸಚಿವರು,ವಿಪಕ್ಷ ಗಳ ನಾಯಕರು, ಬಿಜೆಪಿ,ಕಾಂಗ್ರೆಸ್,ಜೆಡಿಎಸ್ ಪಕ್ಷಗಳ ಶಾಸಕಾಂಗದ ನಾಯಕರುಗಳು ಭಾಗವಹಿಸಲಿದ್ದಾರೆ. ಅವರ ಸಭೆಯ ಬಳಿಕ ರಾಜ್ಯದಲ್ಲಿ ಕರ್ಪ್ಯೂ ಜಾರಿ, ಕಠಿಣ ಕ್ರಮಗಳ ಬಗ್ಗೆ ಅಂತಿಮ ತೀರ್ಮಾನ ತೆಗೆಯುವ ಸಾಧ್ಯತೆ ಇದೆ ಎನ್ನಲಾಗಿದೆ.