ಬೆಂಗಳೂರು: ಕಾವೇರಿ ನೀರು ವಿಚಾರವಾಗಿ ಆಗಸ್ಟ್ 23 ರಂದು ಸರ್ವ ಪಕ್ಷ ಸಭೆ ಕರೆಯಲಾಗಿದೆ. ಕರ್ನಾಟಕ ಮತ್ತು ತಮಿಳುನಾಡಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಲಹೆ ನೀಡಲು ಕೆಲ ಹಿರಿಯ ಸಂಸದ ಸದಸ್ಯರನ್ನು ಕೂಡಾ ಆಹ್ವಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ತಮಿಳುನಾಡು ನೀರು ಬಳಕೆ ವಿಚಾರದಲ್ಲಿ ನಾವು ಏನನ್ನೂ ಮಾಡಿಲ್ಲ, ಜೆಡಿಎಸ್, ಬಿಜೆಪಿ ಅಧಿಕಾರದಲ್ಲಿದ್ದಾಗ ಕಾವೇರಿ ವಿಚಾರದಲ್ಲಿ ಏನು ಮಾಡಿದರು ಎಂಬುದು ಗೊತ್ತಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಬೇಕು ಆದರೆ, ಅವರು ಮಾಡಿಲ್ಲ. ನಾವು ತಮಿಳುನಾಡಿಗೆ ಎಷ್ಟು ಪ್ರಮಾಣದ ನೀರು ಬಿಟ್ಟಿದ್ದೇವೆ ಎಂಬುದರ ಬಗ್ಗೆ ದಾಖಲೆಗಳಿವೆ. ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು” ಎಂದರು.