Home ಟಾಪ್ ಸುದ್ದಿಗಳು ವಿವಾದಿತ ಕೃಷಿ ಕಾನೂನು ರದ್ದತಿಗೂ ಮುನ್ನ ಕರೆದ ಸರ್ವಪಕ್ಷ ಸಭೆಗೆ ಪ್ರಧಾನಿ ಗೈರು

ವಿವಾದಿತ ಕೃಷಿ ಕಾನೂನು ರದ್ದತಿಗೂ ಮುನ್ನ ಕರೆದ ಸರ್ವಪಕ್ಷ ಸಭೆಗೆ ಪ್ರಧಾನಿ ಗೈರು

ಹೊಸದಿಲ್ಲಿ: ವಿವಾದಿತ ಕೃಷಿ ಕಾನೂನು ರದ್ದತಿಗೂ ಮುನ್ನ ಕರೆದಿರುವ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಾಗಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಒಂದು ದಿನ ಮೊದಲು ಸರ್ವಪಕ್ಷ ಸಭೆ ಕರೆಯಲಾಗಿತ್ತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯೆಲ್ ಸಭೆಯಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಪ್ರಧಾನಿ ಸಭೆಗೆ ಗೈರಾಗಿದ್ದನ್ನು ಕಾಂಗ್ರೆಸ್ ಪ್ರಶ್ನಿಸಿದೆ.

‘ಇಂದಿನ ಸಭೆಯಲ್ಲಿ ಪ್ರಧಾನಿ ಭಾಗವಹಿಸುತ್ತಾರೆ ಎಂದು ನಾವು ನಿರೀಕ್ಷಿಸಿದ್ದೆವು. ಅವರ ಬಳಿ ಕೃಷಿ ಕಾನೂನುಗಳ ಬಗ್ಗೆ ಚರ್ಚಿಸಲು ಬಯಸಿದ್ದೆವು. ಕೃಷಿ ಕಾನೂನುಗಳು ಇನ್ಯಾವುದೋ ರೂಪದಲ್ಲಿ ಬರಬಹುದೆಂಬ ಅನುಮಾನವಿದೆ’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕೃಪಿ ಕಾನೂನುಗಳ ವಿರುದ್ಧ ಪ್ರತಿಭಟನೆಯ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ ಈ ವೇಳೆ ಒತ್ತಾಯಿಸಿದೆ. ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ ಹತ್ಯೆಗೈದ ಆರೋಪ ಹೊತ್ತಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡುವಂತೆ ಎಲ್ಲ ಪಕ್ಷಗಳು ಒತ್ತಾಯಿಸಿವೆ.

Join Whatsapp
Exit mobile version