ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳ ಪರ: ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳ ಪರವಾಗಿದೆ. ಈ ಕಾರಣದಿಂದಾಗಿ ಅದನ್ನು ನಿಭಾಯಿಸಲು ನ್ಯಾಯಾಂಗದ ಪ್ರಯತ್ನವನ್ನು ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

- Advertisement -

ಚುನಾವಣಾ ಸಮಯದಲ್ಲಿ ಪಕ್ಷಗಳು ಉಚಿತ ಕೊಡುಗೆಗಳ ಭರವಸೆಗಳನ್ನು ವಿರೋಧಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ವಿಷಯದಲ್ಲಿ, ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಒಂದೇ ತರ: ಎಂದಷ್ಟೇ ಹೇಳಬಹುದು. ಪ್ರತಿಯೊಬ್ಬರೂ ಉಚಿತ ಕೊಡುಗೆಗಳಲ್ಲಿ ಕಲ್ಯಾಣ ಕಾರ್ಯಕ್ರಮ ಯಾವುದು ಎಂಬುದನ್ನು ನಿರ್ಧರಿಸಲು ಸಮಿತಿಯೊಂದನ್ನು ರಚಿಸಲು ಕೋರ್ಟ್ ಮುಂದಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಿ.ಟಿ.ರವಿಕುಮಾರ್ ಅವರನ್ನು ಒಳಗೊಂಡ ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ಉಚಿತ ಕೊಡುಗೆಗಳು ಹಾಗೂ ಈ ವಿಷಯವಾಗಿ ನ್ಯಾಯಾಂಗದ ಹಸ್ತಕ್ಷೇಪ ಕುರಿತು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಡಿಎಂಕೆ ಪಕ್ಷ ಹಾಗೂ ಅದರ ಕೆಲ ಮುಖಂಡರಿಗೆ ನ್ಯಾಯಪೀಠ ಛೀಮಾರಿ ಹಾಕಿತು.

- Advertisement -

ಸಮಾಜದಲ್ಲಿರುವ ನಿರ್ಲಕ್ಷ್ಯಕ್ಕೆ ಒಳಗಾದ ಜನರನ್ನು ಮೇಲೆತ್ತುವುದಕ್ಕಾಗಿ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ. ಇವುಗಳನ್ನು ಉಚಿತ ಕೊಡುಗೆಗಳು ಎನ್ನಲಾಗದು’ ಎಂದು ಡಿಎಂಕೆ ಪರ ವಕೀಲ ಪಿ.ವಿಲ್ಸನ್ ಅವರನ್ನು ಉದ್ದೇಶಿಸಿ ನ್ಯಾಯಪೀಠ ಹೇಳಿತು.

Join Whatsapp