ಕೇರಳ: ಹಾಸ್ಟಲ್ ನಿಂದ ನಾಪತ್ತೆಯಾದ ಎಲ್ಲಾ ಆರು ಬಾಲಕಿಯರು ಪತ್ತೆ

Prasthutha: January 28, 2022

ಕಲ್ಲಿಕೋಟೆ: ಇಲ್ಲಿನ ಸರ್ಕಾರಿ ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಎಲ್ಲಾ ಆರು ಬಾಲಕಿಯಯರನ್ನು ಕೇರಳ ಮತ್ತು ಕರ್ನಾಟಕದ ವಿವಿಧ ಸ್ಥಳಗಳಿಂದ ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಸಂಜೆ ವೆಲ್ಲಿಮಡುಕುನ್ನದಲ್ಲಿರುವ ಸರ್ಕಾರಿ ಹಾಸ್ಟೆಲ್ ನಿಂದ ಆರು ಬಾಲಕಿಯರು ನಾಪತ್ತೆಯಾಗಿದ್ದರು.

ಈ ಮಧ್ಯೆ ಬೆಂಗಳೂರಿನ ಮಡಿವಾಳದ ಹೋಟೆಲ್ ಒಂದರಲ್ಲಿ ಗುರುವಾರ ಬಾಲಕಿಯೊಬ್ಬಳನ್ನು ಪೊಲೀಸರು ಹಚ್ಚಿದ್ದರು. ಗುರುವಾರ ತಡರಾತ್ರಿ ಮೈಸೂರಿನಿಂದ ಕಲ್ಲಿಕೋಟೆಗೆ ಬಸ್ಸು ಹತ್ತುತ್ತಿದ್ದ ವೇಳೆ ಮತ್ತೊಬ್ಬ ಬಾಲಕಿಯನ್ನು ಪತ್ತಹಚ್ಚಲಾಗಿತ್ತು. ಶುಕ್ರವಾರ ಮಧ್ಯಾಹ್ನದ ಸುಮಾರಿಗೆ ಮಲಪ್ಪುರಮ್ ನ ನಿಲಂಬೂರ್ ನಲ್ಲಿ ಇತರ ನಾಲ್ವರನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ ಕರ್ನಾಟಕದಿಂದ ರೈಲಿನಲ್ಲಿ ಪಾಲಕ್ಕಾಡ್ ಗೆ ಬಂದಿದ್ದಾರೆ ಎನ್ನಲಾದ ನಾಲ್ವರು ಬಾಲಕಿಯರು ರಸ್ತೆ ಮಾರ್ಗದ ಮೂಲಕ ನಿಲಂಬೂರ್ ಗೆ ತೆರಳುತ್ತಿದ್ದಾಗ ಸ್ಥಳೀಯರು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹೇಳಲಾಗಿದೆ.

ಈ ಪ್ರಕರಣದ ಕುರಿತು ಪೊಲೀಸರು ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತಾ, ಬಾಲಕಿಯರ ನಾಪತ್ತೆಗೆ ನಿಖರ ಕಾರಣ ಮತ್ತು ಬಾಹ್ಯ ಬೆಂಬಲ ಸೇರಿದಂತೆ ಹಲವು ಆಯಾಮಗಳಲ್ಲಿ ಸಂಪೂರ್ಣ ತನಿಖೆಯ ಬಳಿಕ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ಘಟನೆಯ ಕುರಿತು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತನಿಖೆ ಕೈಗೆತ್ತಿಕೊಂಡಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದೆಂದು ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಬಿ.ಬಬಿತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!