ಜಾತಿ ಆಧಾರಿತ ರ್‍ಯಾಲಿ ಪ್ರಶ್ನಿಸಿ ಮುಖ್ಯ ಚುನಾವಣಾ ಆಯುಕ್ತ, ಪ್ರಮುಖ ಪಕ್ಷಗಳಿಗೆ ಅಲಹಾಬಾದ್ ಹೈಕೋರ್ಟ್ ನೋಟಿಸ್

Prasthutha|

ಲಕ್ನೋ: ಪ್ರಮುಖ ರಾಜ್ಯದಲ್ಲಿ ಜಾತಿ ಆಧಾರಿತ ರ್ಯಾಲಿಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿ ಲಕ್ನೋ ಹೈಕೋರ್ಟ್’ನ ಅಲಹಾಬಾದ್ ಪೀಠವು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಆಯುಕ್ತರು ಮತ್ತು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಎಸ್ಪಿ, ಬಿಎಸ್ಪಿ ಹಾಗೂ ಕಾಂಗ್ರೆಸ್’ಗೆ  ನೋಟಿಸ್ ನೀಡಿದೆ.

- Advertisement -

ಅಂತಹ ರ್ಯಾಲಿಗಳು ನಡೆದರೆ ಚುನಾವಣಾ ಆಯೋಗ ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದೂ ಪ್ರಶ್ನಿಸಲಾಗಿದೆ. ಒಂಬತ್ತು ವರ್ಷಗಳ ಹಿಂದೆ ಈ ಸಂಬಂಧ ಹೊರಡಿಸಿದ್ದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಯಾವುದೇ ಕ್ರಮ ಕೈಗೊಳ್ಳದ ಕಾರಣ ಹೈಕೋರ್ಟ್ ಹೊಸದಾಗಿ ನೋಟಿಸ್ ನೀಡಿದೆ.

ವಕೀಲ ಮೋತಿಲಾಲ್ ಯಾದವ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಾಜೇಜ್ ಬಿಂದಲ್ ಮತ್ತು ನ್ಯಾಯಮೂರ್ತಿ ಜಸ್ಪ್ರೀತ್ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠ ಈ ನೋಟಿಸ್ ನೀಡಿದೆ. ಅರ್ಜಿದಾರರು ಉತ್ತರ ಪ್ರದೇಶದಲ್ಲಿ ಜಾತಿ ಆಧಾರಿತ ರ್ಯಾಲಿಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಕೋರಿದ್ದರು.

- Advertisement -

ಈ ಬಗ್ಗೆ ಪ್ರತಿಕ್ರಿಯಿಸುವಂತೆ ಭಾರತ ಮುಖ್ಯ ಚುನಾವಣಾ ಆಯುಕ್ತರಿಗೂ ನೋಟಿಸ್ ನೀಡಲಾಗಿದ್ದು, ಡಿ. 15ರಂದು ಅರ್ಜಿಯ ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ.



Join Whatsapp