Home ಟಾಪ್ ಸುದ್ದಿಗಳು ಭೂ ಹಗರಣ: ಉತ್ತರಪ್ರದೇಶ ಉಪ ಮುಖ್ಯಮಂತ್ರಿಗೆ ಅಲಹಾಬಾದ್ ಹೈಕೋರ್ಟ್ ನೋಟಿಸ್

ಭೂ ಹಗರಣ: ಉತ್ತರಪ್ರದೇಶ ಉಪ ಮುಖ್ಯಮಂತ್ರಿಗೆ ಅಲಹಾಬಾದ್ ಹೈಕೋರ್ಟ್ ನೋಟಿಸ್

ಲಕ್ನೋ: ಮನೆ ಕಬಳಿಕೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಗೆ ಅಲಹಾಬಾದ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪ್ರಯಾಗ್ ರಾಜ್ ನ ವಿಷ್ಣು ಮೂರ್ತಿ ತ್ರಿಪಾಠಿ ಎಂಬವರು ಸಲ್ಲಿಸಿದ್ದ ರಿಟ್ ಅರ್ಜಿಯಲ್ಲಿ ಮೌರ್ಯ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಲಾಗಿತ್ತು.

ಭೂಕಬಳಿಕೆ ಮತ್ತು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜನವರಿ 10, 2022 ರಂದು ಪ್ರತಿಕ್ರಿಯಿಸುವಂತೆ ನ್ಯಾಯಮೂರ್ತಿಗಳಾದ ಮನೋಜ್ ಕುಮಾರ್ ಗುಪ್ತಾ, ಓಂ ಪ್ರಕಾಶ್ ತ್ರಿಪಾಠಿ ಅವರನ್ನೊಳಗೊಂಡ ವಿಭಾಗೀಯ ಪೀಠವು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಉಪ ಮುಖ್ಯಮಂತ್ರಿ ಮೌರ್ಯ ಮತ್ತು ಬೆಂಬಲಿಗರು ಖಾಸಗಿ ಭೂಮಿ ಮತ್ತು ನಿವಾಸವನ್ನು ಕಬಳಿಸಲು ಸಂಚು ರೂಪಿಸಿದ್ದಾರೆ ಎಂದು ವಿಷ್ಣು ಪೂರ್ತಿ ತ್ರಿಪಾಠಿ ತನ್ನ ಅರ್ಜಿಯಲ್ಲಿ ಆರೋಪಿಸಿದ್ದ

Join Whatsapp
Exit mobile version