Home ಟಾಪ್ ಸುದ್ದಿಗಳು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಝುಬೈರ್ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಝುಬೈರ್ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್

ಲಖನೌ: ಹಿಂದುತ್ವ ಮುಖಂಡರಾದ ಯತಿ ನರಸಿಂಹಾನಂದ ಸರಸ್ವತಿ, ಬಜರಂಗ ಮುನಿ ಮತ್ತು ಆನಂದ ಸ್ವರೂಪ್ ಅವರ ದ್ವೇಷಭಾಷಣವನ್ನು ವಿರೋಧಿಸಿ ಟ್ವೀಟ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಪ್ರಶ್ನಿಸಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಝುಬೇರ್ ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

ಉತ್ತರ ಪ್ರದೇಶ ಪೊಲೀಸರು ಮುಹಮ್ಮದ್ ಝುಬೇರ್ ವಿರುದ್ಧ ಐಪಿಸಿ ಸೆಕ್ಷನ್ 295 ಎ ಮತ್ತು ಐಟಿ ಕಾಯ್ದೆ 67 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಮಧ್ಯೆ ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮುಹಮ್ಮದ್ ಝುಬೇರ್ ಅರ್ಜಿ ಸಲ್ಲಿಸಿದ್ದು, ಟ್ವೀಟ್ ನಲ್ಲಿ ಯಾವುದೇ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿಲ್ಲ ಅಥವಾ ಅವಮಾನಿಸುವ ಪ್ರಯತ್ನ ಮಾಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.ಅಲ್ಲದೆ ತನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ತನ್ನ ವಿರುದ್ಧ ದೂರು ದಾಖಲಿಸಲಾಗಿದ್ದು, ಆದ್ದರಿಂದ ಅದನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಸದ್ಯ ನ್ಯಾಯಮೂರ್ತಿಗಳಾದ ರಮೇಶ್ ಸಿನ್ಹಾ ಮತ್ತು ಅಜಯ್ ಕುಮಾರ್ ಶ್ರೀವಾಸ್ತವ ಅವರನ್ನೊಳಗೊಂಡ ಪೀಠ ಈ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದೆ.

Join Whatsapp
Exit mobile version