ಪ್ರಧಾನಿ ನಿಂದನೆ ಅಭಿವ್ಯಕ್ತಿ ಸ್ವಾತಂತ್ರ್ಯವಲ್ಲ ಎಂದ ಅಲಹಾಬಾದ್ ಹೈಕೋರ್ಟ್

Prasthutha|

ಅಲಹಾಬಾದ್: ದೇಶದ ಯಾವುದೇ ನಾಗರಿಕನು ಪ್ರಧಾನಿ ಅಥವಾ ಯಾವುದೇ ಸಚಿವರ ವಿರುದ್ಧ ಹೇಳಿಕೆ ನೀಡುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

- Advertisement -

ಮುಮ್ತಾಜ್ ಮನ್ಸೂರಿ ಎಂಬವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರಿಗೆ ಅವಹೇಳನಕಾರಿ ಪದಗಳನ್ನ ಬಳಸಿದ್ದಾರೆ ಎಂದು ಆರೋಪಿಸಲಾಗಿತ್ತು. 2020ರಲ್ಲಿ, ಮುಮ್ತಾಜ್ ಮನ್ಸೂರಿ ವಿರುದ್ಧ ಐಪಿಸಿಯ ಸೆಕ್ಷನ್ 504 ಮತ್ತು ಐಟಿ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇದನ್ನು ಪ್ರಶ್ನಿಸಿ ಮುಮ್ತಾಜ್ ಮನ್ಸೂರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿದ್ದರು.

ಆದರೆ ಹೈಕೋರ್ಟ್ ಎಫ್ಐಆರ್ ನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದು, ಎಫ್ಐಆರ್ ನಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಆಧಾರವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅಲ್ಲದೆ, ದೇಶದ ಯಾವುದೇ ನಾಗರಿಕ ಪ್ರಧಾನಿ ಅಥವಾ ಯಾವುದೇ ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಲು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸುವಂತಿಲ್ಲ ಎಂದೂ ನ್ಯಾಯಾಲಯ ಹೇಳಿದೆ.



Join Whatsapp