ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಪುತ್ರ ಹಾಗೂ ಸೊಸೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
- Advertisement -
ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧವೂ ಭ್ರಷ್ಟಚಾರ ಕಾಯ್ದೆಯಡಿ ಕೇಸ್ ಆಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ಹಾಗೂ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ವಿನೋದ್ ಎಂಬವರು ಖಾಸಗಿ ದೂರು ದಾಖಲಿಸಿದ್ದಾರೆ.
- Advertisement -
ಖಾಸಗಿ ದೂರಿನ ಅನ್ವಯ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ ನೀಡಿತ್ತು. ಕೋರ್ಟ್ ಸೂಚನೆ ಬಳಿಕ ಲೋಕಾಯುಕ್ತ ಠಾಣೆಯಲ್ಲಿ ಕೇಸ್ ಆಗಿದೆ. ಪ್ರಕರಣದ ಬೆನ್ನಲ್ಲೇ ದಾಖಲೆಗಳನ್ನ ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ.