Home ಜಾಲತಾಣದಿಂದ ದೇವೇಗೌಡ ವಿರುದ್ಧ ಅವಹೇಳನಕಾರಿ ಪೋಸ್ಟ್| ಪ್ರಶಾಂತ್ ಸಂಬರಗಿ ವಿರುದ್ಧ FIR ದಾಖಲು

ದೇವೇಗೌಡ ವಿರುದ್ಧ ಅವಹೇಳನಕಾರಿ ಪೋಸ್ಟ್| ಪ್ರಶಾಂತ್ ಸಂಬರಗಿ ವಿರುದ್ಧ FIR ದಾಖಲು

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರಗಿ ವಿರುದ್ಧ ನಗರದ ಶ್ರೀರಾಮಪುರ ಪೊಲೀಸರು ಬುಧವಾರ ಎಫ್​ಐಆರ್ ದಾಖಲಿಸಿ ವಿಚಾರಣೆ ನಡೆಸಿದ್ದಾರೆ.

ವಿಚಾರಣೆಯ ನಂತರ ಪ್ರಶಾಂತ್ ಸಂಬರಗಿಯಿಂದ ಮುಚ್ಚಳಿಕೆ ಹಾಗೂ 1 ಲಕ್ಷ ರೂ. ಬಾಂಡ್ ಬರೆಸಿಕೊಂಡು ಅವರನ್ನು ಕಳುಹಿಸಿಕೊಡಲಾಯಿತು. ದೇವೇಗೌಡರ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ​ನಾಯಕರು ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹಗೊಂಡ ಸಂದರ್ಭದಲ್ಲಿ ಅದಕ್ಕೆ ಪೂರಕವಾಗಿ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿದ್ದ ಪ್ರಶಾಂತ್ ಸಂಬರಗಿ, ‘ಈ ಕೇಸ್ ಬಗ್ಗೆ ಸಿಂಪಲ್ ಆಗಿ ಹೇಳಬೇಕು ಎಂದರೆ, ದೇವೇಗೌಡ ಕಳ್ಳ ಅನ್ನೋದಕ್ಕೂ, ಗೌಡರು ಅನ್ನೋರೆಲ್ಲ ಕಳ್ಳರೇ ಯಾಕಿರುತ್ತಾರೆ ಅನ್ನೋದಕ್ಕೂ ವ್ಯತ್ಯಾಸ ಇದೆ. ಮೊದಲನೆಯದ್ದಕ್ಕೆ ದೇವೇಗೌಡರು ಕೇಸ್ ಹಾಕಬೇಕು, ಎರಡನೆಯದ್ದಕ್ಕೆ ಅವನ ಮಗನೋ ಮೊಮ್ಮಗನೋ ಅಥವಾ ಯಾರಾದರೂ ಗೌಡ ಕೇಸ್ ಹಾಕಬಹುದು’ ಎಂದು ಉಲ್ಲೇಖಿಸಿದ್ದರು.

Join Whatsapp
Exit mobile version