ಸೇನೆಯ ಭೂಮಿ ಒತ್ತುವರಿ ಆರೋಪ; ಪ.ಬಂಗಾಳ, ಜಾರ್ಖಂಡ್‌ನಲ್ಲಿ E.D ದಾಳಿ

Prasthutha|

ರಕ್ಷಣಾ ಭೂಮಿಯನ್ನು ಮಾರಾಟ ಮಾಡಲು ನಕಲಿ ದಾಖಲೆಗಳನ್ನು ಬಳಸಲಾಗಿದೆ ಎಂಬ ಆರೋಪದ ಮೇಲೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ಹಲವು ಸ್ಥಳಗಳಲ್ಲಿ ಶುಕ್ರವಾರ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಅ.8ರಂದು ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಆಪ್ತ, ಉದ್ಯಮಿ ಅಮಿತ್‌ ಅಗರ್ವಾಲ್‌ ಅವರನ್ನು ಇ.ಡಿ ಬಂಧಿಸಿತ್ತು ಬಂಧಿತ ಉದ್ಯಮಿ ಅಮಿತ್ ಅಗರ್ವಾಲ್ ಗೆ ಸಂಬಂಧಿಸಿದ ಕಚೇರಿಗಳು ಸೇರಿದಂತೆ ರಾಂಚಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಂಟು ಸ್ಥಳಗಳು ಮತ್ತು ಕೋಲ್ಕತ್ತಾದ ನಾಲ್ಕು ಸ್ಥಳಗಳನ್ನು ಫೆಡರಲ್ ಏಜೆನ್ಸಿ ಶೋಧಿಸುತ್ತಿದೆ.

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ವಿರುದ್ಧ ಇಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌)ಗಳನ್ನು ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ರಾಜೀವ್‌ ಕುಮಾರ್‌ ಅವರನ್ನು ʻಟ್ರ್ಯಾಪ್‌ʼ ಮಾಡಲು ಸಂಚು ರೂಪಿಸಿದ್ದ ಆರೋಪದಡಿ ಕಳೆದ ತಿಂಗಳು ಅಮಿತ್‌ ಅಗರ್ವಾಲ್‌ ಅವರನ್ನು ಇ.ಡಿ ಬಂಧಿಸಿತ್ತು.

Join Whatsapp