ಲೈಂಗಿಕ ಕಿರುಕುಳ ಆರೋಪ; ಹರ್ಯಾಣ ಕ್ರೀಡಾ ಸಚಿವ ಸಂದೀಪ್ ಸಿಂಗ್ ರಾಜೀನಾಮೆ

Prasthutha|

ಚಂಡೀಗಢ: ಲೈಂಗಿಕ ಕಿರುಕುಳ ಹಾಗೂ ಕ್ರಿಮಿನಲ್ ಬೆದರಿಕೆ ಪ್ರಕರಣ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರುವ ಹರ್ಯಾಣ ಕ್ರೀಡಾ ಸಚಿವ ಸಂದೀಪ್ ಸಿಂಗ್ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಇಮೇಜ್ ಹಾಳು ಮಾಡುವ ಯತ್ನ ನಡೆಯುತ್ತಿದೆ, ನನ್ನ ವಿರುದ್ಧ ಹೊರಿಸಲಾಗಿರುವ ಸುಳ್ಳು ಆರೋಪಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು. ತನಿಖೆಯ ವರದಿ ಬರುವವರೆಗೆ ಕ್ರೀಡಾ ಇಲಾಖೆಯ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸುತ್ತೇನೆ ಎಂದು ಹೇಳಿದರು.


ಮಾಜಿ ಹಾಕಿ ನಾಯಕ ಮತ್ತು ಕುರುಕ್ಷೇತ್ರದ ಪೆಹೋವಾದ ಬಿಜೆಪಿ ಶಾಸಕರೂ ಆಗಿರುವ ಹರಿಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಮಹಿಳಾ ಜೂನಿಯರ್ ಅಥ್ಲೆಟಿಕ್ಸ್ ಕೋಚ್ವೊಬ್ಬರು ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354, 354 ಎ, 354 ಬಿ, 342 ಮತ್ತು 506 ಅಡಿಯಲ್ಲಿ ಸೆಕ್ಟರ್ 26 ಪೊಲೀಸ್ ಠಾಣೆಯಲ್ಲಿ ಶನಿವಾರ ಕೇಸ್ ದಾಖಲಾಗಿತ್ತು.



Join Whatsapp