ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯ: ಜಿ.ಟಿ. ದೇವೇಗೌಡ

Prasthutha|

ಮೈಸೂರು: ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ ಎಂದು ಶಾಸಕ, ಆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಏನಾದರೂ ಮಾಡಿಕೊಳ್ಳಿ. ಆದರೆ, ಲೋಕಸಭಾ ಚುನಾವಣೆಯಲ್ಲಿ ಮಾತ್ರ ಹೊಂದಾಣಿಕೆ ಮಾಡಿಕೊಳ್ಳುವಂತೆ ವರಿಷ್ಠ ಎಚ್.ಡಿ. ದೇವೇಗೌಡರನ್ನು ಕೋರಿದ್ದೇನೆ ಎಂದು ಹೇಳಿದರು.


ಪಿರಿಯಾಪಟ್ಟಣದಲ್ಲಿ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಲು ಎಫ್ಐಆರ್ ದಾಖಲಿಸಲಾಗುತ್ತಿದೆ. ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ. ಕಾರ್ಯಕರ್ತರಿಗೆ ರಕ್ಷಣೆ ಸಿಗುತ್ತಿಲ್ಲ. ಗ್ಯಾರಂಟಿಗಳ ಕಾರಣದಿಂದಾಗಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದರು.

Join Whatsapp