ಪುಣೆ: ಬಿಜೆಪಿ ಜೊತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ನಮ್ಮ ನಿಲುವು ಯಾವಾಗಲೂ ಸ್ಪಷ್ಟವಾಗಿರುತ್ತದೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ನಮ್ಮ ಈ ನಿಲುವಿನ ವಿರುದ್ಧವಾಗಿ ಯಾವುದೇ ಸಲಹೆ ಬಂದರೂ ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇಂದು ಪುಣೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಶರದ್ ಪವಾರ್ ಮಾತನಾಡಿದರು.
ಎನ್ ಸಿಪಿ ವಿರುದ್ಧ ಬಂಡಾಯ ಎದ್ದು ಬಿಜೆಪಿ ಜೊತೆ ಕೈಜೋಡಿಸಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನಿನ್ನೆಯಷ್ಟೇ ಶರದ್ ಪವಾರ್ ನೇತೃತ್ವದ ಗುಂಪು ತನ್ನನ್ನು ಸಂಪರ್ಕಿಸುತ್ತಿದೆ ಎಂದು ಹೇಳಿದ್ದರು. ಸಿಎಂ ಶಿಂಧೆ ಕೂಡ ಎನ್ಸಿಪಿ ಜೊತೆಗೂಡಿ ಲೋಕಸಭಾ ಚುನಾವಣೆ ಎದುರಿಸುತ್ತೇವೆ ಎಂದು ಇದೇ ಅರ್ಥದಲ್ಲಿ ಹೇಳಿದ್ದರು.
ನಾವು ತೆಗೆದುಕೊಂಡ ನಿಲುವಿಗೆ ವಿರುದ್ಧವಾಗಿ, ಬಿಜೆಪಿಯನ್ನು ಬೆಂಬಲಿಸಬೇಕೆಂದು ಯಾರಾದರೂ ಸೂಚಿಸಿದರೆ, ನಾನು ಸೇರಿದಂತೆ ಪಕ್ಷದ ಅನೇಕರು ಅದನ್ನು ಒಪ್ಪುವುದಿಲ್ಲ. ಬಿಜೆಪಿಯೊಂದಿಗೆ ಹೋಗುವುದಿಲ್ಲ ಎಂಬ ನಮ್ಮ ನಿಲುವು ತುಂಬಾ ಸ್ಪಷ್ಟವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಬೆಳಗಿನ ಜಾವ ಪ್ರಮಾಣ ವಚನ ಸ್ವೀಕರಿಸಿದ್ದ ಯಾರಾದರೂ ಬಿಜೆಪಿ ಬೆಂಬಲಿಸುವುದು ಪಕ್ಷದ ನೀತಿ ಎಂದು ಹೇಳಿರಬಹುದು. ಆದರೆ ಆ ವ್ಯಕ್ತಿಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಅವರು ಪರೋಕ್ಷವಾಗಿ ಹಿರಿಯ ರಾಜಕಾರಣಿ ಶರದ್ ಪವಾರ್
ಅಜಿತ್ ಪವಾರ್ಗೆ ಟಾಂಗ್ ನೀಡಿದ್ದಾರೆ.