ಜಾತ್ಯತೀತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿ: ಸಿಎಂ ಸಿದ್ದರಾಮಯ್ಯ

Prasthutha|

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಜೆಡಿಎಸ್, ಬಿಜೆಪಿ ಮೈತ್ರಿ ಸಂಬಂಧಿಸಿದಂತೆ ಜಾತ್ಯತೀತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಹೆಚ್ ಡಿ ದೇವೇಗೌಡರು ಯಾವ ಪಕ್ಷದ ಜೊತೆಗೂ ಮೈತ್ರಿ ಇಲ್ಲ ಎಂದಿದ್ದರು. ಆದರೆ ಇದೀಗ ಬಿಜೆಪಿ ಜೊತೆ ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಯಾರ ಜೊತೆಯಾದರೂ ಜೆಡಿಎಸ್ನವರು ಸೇರಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷವನ್ನು ಬಿಜೆಪಿ ಬಿ ಟೀಂ ಅಂತ ಕರೆಯುತ್ತಿದ್ದೆ. ಈಗ ಜೆಡಿಎಸ್ ಬಿಜೆಪಿಯ ಬಿ ಟೀಂ ಅನ್ನೋದು ಸಾಬೀತಾಗಿದೆ ಎಂದು ವಾಗ್ದಾಳಿ ಮಾಡಿದರು.


ಮಹದಾಯಿ ಯೋಜನೆ ವಿಚಾರವಾಗಿ ಮಾತನಾಡಿದ ಅವರು ಕೇಂದ್ರ ಸರ್ಕಾರ, ಅರಣ್ಯ ಮತ್ತು ಎನ್ವಿರಾನಮೆಂಟ್ ಕ್ಲಿಯರೆನ್ಸ್ ಕಳಿಸಿಲ್ಲ. ಮೊದಲು ಕೇಂದ್ರ ಸರ್ಕಾರ ಕ್ಲಿಯರೆನ್ಸ್ ಕಳಿಸಲಿ. ನಾವು ಪ್ರಧಾನಿಯವರಿಗೆ ಸಮಯ ಕೇಳಿದ್ದೇವೆ. ಮಹದಾಯಿ, ಕೃಷ್ಣಾ ,ಕಾವೇರಿ ಸೇರಿದಂತೆ ಹಲವು ವಿಚಾರದ ಬಗ್ಗೆ ಹತ್ತು ದಿನಗಳ ಹಿಂದೆ ಪ್ರಧಾನಿ ಅವರಿಗೆ ಪತ್ರ ಬರೆದಿದ್ದೇನೆ. ನಿಯೋಗದೊಂದಿಗೆ ಬರುತ್ತೇವೆ ಅಂತ ತಿಳಿಸಿದ್ದೇನೆ. ಆದರೆ ಈವರೆಗೂ ಅವರಿಂದ ಉತ್ತರ ಬಂದಿಲ್ಲ. ಬರಗಾಲ ಘೋಷಣೆ ಮಾಡುತ್ತೇವೆ. ಆದರೆ ಕೇಂದ್ರ ಸರ್ಕಾರದ ನೆರವು ಬೇಕು. ನಿಯಮ ಬದಲಾವಣೆ ಮಾಡಿ ಅಂತ ಪತ್ರ ಬರೆದಿದ್ದೇನೆ. ಅದನ್ನು ಇದುವರೆಗೂ ಮಾಡಿಲ್ಲ ಎಂದು ತಿಳಿಸಿದರು.

Join Whatsapp