Home ಕರಾವಳಿ ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ತೆರವಿಗೆ ಅವಕಾಶ ನೀಡೆವು; SDTU

ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ತೆರವಿಗೆ ಅವಕಾಶ ನೀಡೆವು; SDTU

ಮಂಗಳೂರು: ಕೋವಿಡ್ ಸಂಕಷ್ಟದ ಕಷ್ಟ ಕಾಲದಲ್ಲಿ ನಷ್ಟಕ್ಕೊಳಗಾಗಿದ್ದ ಬೀದಿ ಬದಿ ವ್ಯಾಪಾರಿಗಳು ಇದೀಗ ಬಹಳ ಶ್ರಮಪಟ್ಟು ತಮ್ಮ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು  ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಅವರನ್ನು ಒತ್ತಾಯಪೂರ್ವಕವಾಗಿ ತೆರವುಗೊಳಿಸುವ ಮಹಾನಗರ ಪಾಲಿಕೆಯ ಕಾರ್ಯಾಚರಣೆಯನ್ನು ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (SDTU) ದ.ಕ ಜಿಲ್ಲಾ ಸಮಿತಿಯು ಖಂಡಿಸಿದೆ.

ಮಂಗಳೂರು ಮಹಾ ನಗರ ಪಾಲಿಕೆಯು ಬೀದಿ ಬದಿ ವ್ಯಾಪಾರಸ್ಥರಿಗೆ ಸೂಕ್ತವಾದ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಬಲವಂತದಿಂದ ತೆರವುಗೊಳಿಸಲು ಪ್ರಯತ್ನಿಸುತ್ತಿರುವ ನಡೆಯು ಬಡ ಹಾಗೂ ಮಧ್ಯಮ ವರ್ಗದ ಗಾಯದ ಮೇಲೆ ಬರೆ ಎಳೆದಂತಾಗಿರುತ್ತದೆ. ಈಗಾಗಲೇ ಕೋವಿಡ್ ಹಾಗೂ ಸ್ಮಾರ್ಟ್ ಸಿಟಿಯ ನೆಪ ದೊಂದಿಗೆ ಮಂಗಳೂರು ಕೇಂದ್ರ ಮಾರುಕಟ್ಟೆಯನ್ನು ನಗರದ ಹೊರವಲಯಕ್ಕೆ  ಸ್ಥಳಾಂತರಗೊಳಿಸಿದ ನಿರ್ಧಾರದಿಂದ ಬಡ ಕೂಲಿ ಕಾರ್ಮಿಕರು ಹಾಗೂ ಬೀದಿ ಬದಿ ವ್ಯಾಪಾರಸ್ಥರ ಬದುಕು ದುಸ್ತರವಾಗಿರುವ ಘಟನೆಯು ಹಚ್ಚ ಹಸಿರಾಗಿರುವ ಈ ಸಂದರ್ಭದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸದ ಹೊರತು ಯಾವುದೇ ಕಾರಣಕ್ಕೂ ಬೀದಿ ಬದಿ ವ್ಯಾಪಾರಸ್ಥರನ್ನು ತೆರವು ಗೊಳಿಸಲು ಅವಕಾಶವನ್ನು ನೀಡುವುದಿಲ್ಲ ಹಾಗೂ ಈ ಬಗ್ಗೆ ಹೋರಾಟವನ್ನು ನಿರಂತರಗೊಳಿಸಲಿದ್ದೇವೆ ಎಂದು ಸೋಶಿಯಲ್ ಡೆಮಾಕ್ರಾಟಿಕ್ ಟ್ರೇಡ್ ಯೂನಿಯನ್ (SDTU) ದ.ಕ ಜಿಲ್ಲಾಧ್ಯಕ್ಷ ಖಾದರ್ ಫರಂಗಿಪೇಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Join Whatsapp
Exit mobile version