ಬೆಂಗಳೂರು: ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಜುಲೈ 2 ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ನೇಮಕ ಮಾಡಲಾಗಿದೆ.
ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿರುವ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.
ನ್ಯಾಯಮೂರ್ತಿ ಅವಸ್ಥಿ ಅವರು ಜುಲೈ 2ರಂದು ತಮ್ಮ 62ನೇ ಹುಟ್ಟುಹಬ್ಬಕ್ಕೂ ಮುನ್ನಾದಿನದಂದು ನಿವೃತ್ತರಾಗುತ್ತಾರೆ.
ಆರಾಧೆ ಅವರು ಕರ್ನಾಟಕ ಹೈಕೋರ್ಟ್ ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯಮರ್ತಿಗಳು 65ನೇ ವರ್ಷ ವಯಸ್ಸಿಗೆ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳು 62ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.