ಅಮಾನತುಲ್ಲಾ ಖಾನ್ ಬಂಧನ : ಬಿಜೆಪಿ ವಿರುದ್ಧ ಸಿಎಂ ಅರವಿಂದ್ ಕೇಜ್ರಿವಾಲ್ ಕೆಂಡಾಮಂಡಲ

Prasthutha|

ನವದೆಹಲಿ : ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಆಮ್‍ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಬಂಧನಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ. ಶಾಸಕರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವ ಮತ್ತು ಪಕ್ಷಕ್ಕೆ ಮಾನಹಾನಿ ಮಾಡುವ ಸಂಚು ಇದಾಗಿದೆ  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಟ್ವೀಟಿ ಮಾಡಿರುವ ಅವರು, ಗುಜರಾತ್‌ನಲ್ಲಿ ಬಿಜೆಪಿಯವರು ತುಂಬಾ ಬಳಲುತ್ತಿರುವಂತೆ ತೋರುತ್ತಿದೆ. ಅದಕ್ಕಾಗಿ ನಮ್ಮ ಸರಕಾರವನ್ನು ಗುರಿಪಡಿಸುತ್ತಿದ್ದಾರೆ.  ಮೊದಲು ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದರು. ಪದೇ ಪದೇ ನ್ಯಾಯಾಲಯಕ್ಕೆ ಮನವಿ ಮಾಡಿದರೂ ಯಾವುದೇ ಸಾಕ್ಷ್ಯವನ್ನು ಮಂಡಿಸಲು ಅವರಿಂದ ಸಾಧ್ಯವಾಗುತ್ತಿಲ್ಲ. ನಂತರ ಮನೀಶ್ ಮನೆ ಮೇಲೆ ದಾಳಿ ನಡೆಸಿದರು. ಆದರೆ ಏನೂ ಪತ್ತೆಯಾಗಿಲ್ಲ. ಈಗ ಅಮಾನತುಲ್ಲಾ ಅವರನ್ನು ಬಂಧಿಸಿದ್ದಾರೆ ಎಂದಿದ್ದಾರೆ.

ಅಮಾನತುಲ್ಲಾ ಖಾನ್ ಅವರ ಆಪ್ತ ಸಹಾಯಕ ಮತ್ತು ವ್ಯಾಪಾರ ಪಾಲುದಾರ ಹಮೀದ್ ಅಲಿಯನ್ನು ದೆಹಲಿ ಪೊಲೀಸರು ಇಂದು ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧಿಸಿದ್ದಾರೆ.

Join Whatsapp