ಅಮರಾವತಿ ಹತ್ಯೆ: ನೂಪುರ್ ಶರ್ಮಾ ಬೆಂಬಲಕ್ಕೆ ನಿಂತವರಿಗೆ ಬೆದರಿಕೆ ಕರೆ ಮಾಡಿದ್ದ ನಾಲ್ವರ ಬಂಧನ

Prasthutha|

ನವದೆಹಲಿ: ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಜನರಿಗೆ ಬೆದರಿಕೆ ಕರೆಗಳನ್ನು ಮಾಡಿದ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ಅಮರಾವತಿ ಪೊಲೀಸರು ಇನ್ನೂ ನಾಲ್ವರನ್ನು ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಮರಾವತಿಯ ಸಿಟಿ ಕೊತ್ವಾಲಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ನೀಲಿಮಾ ರಾಜ್ ಹೇಳಿದ್ದಾರೆ.

ನೂಪುರ್ ಶರ್ಮಾ ಅವರ ಪೋಸ್ಟ್ ಬಗ್ಗೆ ಯಾರಾದರೂ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಿದರೆ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ ಎಂದು ಅಮರಾವತಿ ಪೊಲೀಸ್ ಕಮಿಷನರ್ ಆರತಿ ಸಿಂಗ್ ತಿಳಿಸಿದ್ದಾರೆ. ದೂರುದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಅವರು ಹೇಳಿದರು.



Join Whatsapp