ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ʼಕ್ಯಾಪ್ಟನ್ ಅಮರೀಂದರ್ ಸಿಂಗ್ʼ ರಾಜೀನಾಮೆ

Prasthutha|

ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಇಂದು ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಂಜಾಬ್ ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಅವ್ರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.


ಮಧ್ಯಾಹ್ನ 2 ಗಂಟೆಯ ನಂತರ ಚಂಡೀಗಢದ ಅವರ ಅಧಿಕೃತ ನಿವಾಸದಲ್ಲಿ ಅವರ ಆಪ್ತ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದಕ್ಕೂ ಮುನ್ನ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿ, ಪದೇ ಪದೇ ಅವಮಾನಕ್ಕೆ ಗುರಿಯಾಗಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗುತ್ತಿದೆ.

- Advertisement -


ಅಮರಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬದಲಾಯಿಸಬೇಕೆಂದು 50ಕ್ಕೂ ಹೆಚ್ಚು ಶಾಸಕರು ಪಕ್ಷದ ಹೈಕಮಾಂಡ್ʼಗೆ ಪತ್ರ ಬರೆದ ನಂತರ ಈ ಬೆಳವಣಿಗೆ ನಡೆದಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

- Advertisement -