ನವದೆಹಲಿ : ಮುಂದಿನ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ‘ಪಂಜಾಬ್ ಲೋಕ ಕಾಂಗ್ರೆಸ್’ ಹಾಗೂ ಸುಖದೇವ್ ಸಿಂಗ್ ದಿಂಡ್ಸಾ ಅವರ ಶಿರೋಮಣಿ ಅಕಾಲಿ ದಳ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಬಿಜೆಪಿ ಘೋಷಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಅಮರಿಂದರ್ ಸಿಂಗ್, “ಮುಂದಿನ ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮೈತ್ರಿ ಕುರಿತಾಗಿ ಮಾತುಕತೆ ನಡೆಸಲಾಯಿತು. ಪಂಜಾಬ್‌ನಲ್ಲಿ ಸ್ಥಿರ ಸರ್ಕಾರ ನೀಡುವ ಗುರಿ ಹೊಂದಿದ್ದೇವೆ” ಎಂದರು.ಇನ್ನು ಕಾಂಗ್ರೆಸ್ ಜೊತೆಗಿನ ಭಿನ್ನಮತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಮರಿಂದರ್ ಸಿಂಗ್ ಪಕ್ಷವನ್ನು ತೊರೆದಿದ್ದರು.
ಕಾಂಗ್ರೆಸ್ ಪಕ್ಷ ತೊರೆದ ಬಳಿಕ ಅಮರಿಂದರ್ ಸಿಂಗ್ ಅವರು ಹೊಸತಾದ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ರೂಪಿಸಿದ್ದರು.