ಅಮೆಜಾನ್‌, ಫ್ಲಿಪ್‌ಕಾರ್ಟ್‌ ಸಂಸ್ಥೆಗಳ ಮೇಲ್ಮನವಿ ಹೈಕೋರ್ಟ್‌ ನಲ್ಲಿ ವಜಾ

Prasthutha|

ಬೆಂಗಳೂರು: ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಆದೇಶಿಸಿರುವ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂಬ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟಿನ ವಿಭಾಗೀಯ ಪೀಠ ವಜಾಗೊಳಿಸಿದೆ.

- Advertisement -

‘ಸಿಸಿಐ ಆದೇಶಿಸಿರುವ ತನಿಖೆಯು ಅಂತಿಮ ಹಂತಕ್ಕೆ ತಲುಪದಂತೆ ತಡೆಯೊಡ್ಡಲು ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ಮೇಲ್ಮನವಿಯನ್ನು ಸಲ್ಲಿಸಿವೆ. ಈ ಮೇಲ್ಮನವಿಗಳು ವಜಾಗೊಳಿಸಲು ಅರ್ಹವಾಗಿವೆ’ ಎಂದು ಕರ್ನಾಟಕ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಸ್ಪರ್ಧಾತ್ಮಕ ಒಪ್ಪಂದಗಳನ್ನು ಕಡೆಗಣಿಸುವ ಮೂಲಕ ಸ್ಪರ್ಧಾತ್ಮಕ ಕಾಯ್ದೆ -2020 ಅನ್ನು ಈ ಸಂಸ್ಥೆಗಳು ಉಲ್ಲಂಘಿಸುತ್ತಿವೆ ಎಂಬ ಆರೋಪದಲ್ಲಿ ಸಿಸಿಐ ತನಿಖೆಗೆ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ಸಂಸ್ಥೆಗಳು 2020 ಜನವರಿ 13ರಂದು ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಏಕ ಸದಸ್ಯ ಪೀಠ ವಜಾಗೊಳಿಸಿತ್ತು.

Join Whatsapp