18 ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಅಮೆಜಾನ್

Prasthutha|

ವಾಷಿಂಗ್ಟನ್: ಇ-ಕಾಮರ್ಸ್ ಕಂಪನಿ ಅಮೆಜಾನ್ ಬರೋಬ್ಬರಿ 18,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದಾಗಿ ತಿಳಿಸಿದೆ.

- Advertisement -


2022ರ ನವೆಂಬರ್’ನಲ್ಲಿ 10,000 ಉದ್ಯೋಗಿಗಳನ್ನು ಮಾತ್ರ ತೆಗೆಯಲಾಗುತ್ತದೆ ಎಂದು ಕಂಪನಿ ಹೇಳಿತ್ತು. ಆದರೀಗ ಹಿಂದೆ ತಿಳಿಸಿದ್ದಕ್ಕಿಂತ ಹೆಚ್ಚು ನೌಕರರನ್ನು ವಜಾಗೊಳಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.


ಕಂಪನಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಉದ್ಯೋಗ ಕಡಿತಕ್ಕೆ ರಿಟೇಲ್ ಮಾರಾಟ, ಮಾನವ ಸಂಪನ್ಮೂಲ ಹಾಗೂ ಉಪಕರಣಗಳ ವಿಭಾಗವನ್ನು ಕೇಂದ್ರೀಕರಿಸಲಿದೆ ಎಂದು ಅಮೆಜಾನ್ ಸಿಇಒ ಆ್ಯಂಡಿ ಜೆಸ್ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp