Home ಟಾಪ್ ಸುದ್ದಿಗಳು ಅಂಬೇಡ್ಕರ್‌ ಜನ್ಮ ದಿನವನ್ನು ಸಾಮಾಜಿಕ ನ್ಯಾಯ ದಿನವಾಗಿ ಆಚರಣೆ: SDPI

ಅಂಬೇಡ್ಕರ್‌ ಜನ್ಮ ದಿನವನ್ನು ಸಾಮಾಜಿಕ ನ್ಯಾಯ ದಿನವಾಗಿ ಆಚರಣೆ: SDPI

ಬೆಂಗಳೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಜನ್ಮ ದಿನವನ್ನು ಎಸ್.ಡಿ.ಪಿ.ಐ. ಪಕ್ಷ ಸಾಮಾಜಿಕ ನ್ಯಾಯ ದಿನವಾಗಿ ಆಚರಿಸುತ್ತದೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ.

ಶತಮಾನಗಳಿಂದ ಜಾತಿಯ ಹೆಸರಿನಲ್ಲಿ ಅಸ್ಪೃಶ್ಯತೆ, ಅವಮಾನ, ಶೋಷಣೆ ಅನುಭವಿಸಿದ ಸಮುದಾಯಕ್ಕೆ ಸಮಾನ ಹಕ್ಕುಗಳನ್ನು ಗಳಿಸಿಕೊಟ್ಟವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರು. ಎಲ್ಲ ಜಾತಿ, ಧರ್ಮದ ಜನರಿಗೂ ಸಮಾನ ಹಕ್ಕು, ಅವಕಾಶಗಳನ್ನು ಮತ್ತು ಸಂವಿಧಾನದ ಮೂಲಕ ಅವರು ತುಳಿತಕ್ಕೆ ಒಳಗಾಗಿದ್ದ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಟ್ಟರು ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಅಂತಹ ಮಹಾನ್ ಮಾನವತಾವಾದಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ತಂದುಕೊಟ್ಟ ಹಕ್ಕುಗಳನ್ನು ಇಂದು ಮನುವಾದಿಗಳು ಮರಳಿ ಕಸಿದು ದೇಶವನ್ನು ಮತ್ತೆ ಗುಲಾಮಗಿರಿಗೆ ನೂಕುವ ಸಂಚು ಮಾಡುತ್ತಿದ್ದಾರೆ. ಸಾಮಾಜಿಕ ನ್ಯಾಯದ ಆಧಾರಸ್ಥಂಭವಾಗಿರುವ ಸಂವಿಧಾನವನ್ನೇ ಬದಲಾಯಿಸುವ ಮಾತುಗಳನ್ನು ಅವರು ಆಡುತ್ತಿದ್ದಾರೆ. ಅಂಬೇಡ್ಕರ್ ಜಯಂತಿಯ ಈ ಸಂದರ್ಭದಲ್ಲಿ ಸಂವಿಧಾನವನ್ನು ವಿರೋಧಿಸುವ ಆ ಮೂಲಕ ಸಾಮಾಜಿಕ ನ್ಯಾಯವನ್ನು ನಿರಾಕರಿಸಲು ಹೊರಟಿರುವವರಿಗೆ ಎಚ್ಚರಿಕೆಯ ಸಂದೇಶ ನೀಡುವ ಮೂಲಕ ಬಾಬಾ ಸಾಹೇಬರ ಪರಂಪರೆಯನ್ನು ಉಳಿಸಿಕೊಳ್ಳೋಣ ಎಂದ ಅಬ್ದುಲ್ ಮಜೀದ್, ಎಲ್ಲರಿಗೂ ಸಾಮಾಜಿಕ ನ್ಯಾಯ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.

Join Whatsapp
Exit mobile version