ಮಂಗಳೂರು: ನಗರದ ಹೊರವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ಸಮಾಜದ ಸ್ವಾಸ್ಥ್ಯ ಕದಡುವಂತಹ ಘಟನೆಯೊಂದು ನಡೆದಿದೆ.
ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಳವಡಿಸಲಾಗಿದ್ದ ಫ್ಲೆಕ್ಸ್ ಹಾನಿಗೊಳಿಸುವ ಮೂಲಕ ಸಮಾಜದಲ್ಲಿ ಅಶಾಂತಿ ನಿರ್ಮಿಸುವ ಪ್ರಯತ್ನ ನಡೆಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ದಾಮೋದರ ಅಸೈಗೋಳಿ ಎಂಬವರ ಮಗ ಶರಣ್ (24) ಮತ್ತು ಗೋಪಾಲಕೃಷ್ಣ ಹರೇಕಳ ಎಂಬವರ ಮಗ ಸುಜಿತ್ (26) ಎಂಬವರವರನ್ನು ಬಂಧಿಸಲಾಗಿದೆ.
ವ್ಶೆಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯವೆಸಗಿದ್ದಾಗಿ ಪೋಲೀಸ್ ತನಿಖೆಯಿಂದ ತಿಳಿದು ಬಂದಿದೆ.