Home ಟಾಪ್ ಸುದ್ದಿಗಳು ಮೋದಿ ಉದ್ಘಾಟಿಸಲಿರುವ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಕಾಂಗ್ರೆಸ್ ನಿರ್ಮಿಸಿದ್ದು: ಸಿದ್ದರಾಮಯ್ಯ

ಮೋದಿ ಉದ್ಘಾಟಿಸಲಿರುವ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಕಾಂಗ್ರೆಸ್ ನಿರ್ಮಿಸಿದ್ದು: ಸಿದ್ದರಾಮಯ್ಯ

ಬೆಂಗಳೂರು: ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಉದ್ಘಾಟಿಸಲಿರುವ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡವನ್ನು ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೆನಪಿಸಿಕೊಂಡಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿದ ಸಿದ್ದರಾಮಯ್ಯ, ಈ ಸಮಾರಂಭಕ್ಕೆ ನಾನು ಶುಭ ಹಾರೈಸುವೆ. BASE ಕಟ್ಟಡದ ಶಂಕುಸ್ಥಾಪನೆ ಮಾಡಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ಈ ಕಟ್ಟಡವನ್ನು 6 ತಿಂಗಳಲ್ಲಿ ಪೂರ್ಣಗೊಳಿಸಿದ್ದು ನಮ್ಮ ಸರ್ಕಾರದ ಹೆಮ್ಮೆಯ ಸಾಧನೆ. ಜ್ಞಾನಭಾರತಿ ಕ್ಯಾಂಪಸ್ನಲ್ಲಿಯೇ ಇದ್ದ ಕಟ್ಟಡದಲ್ಲಿಯೇ 2017ರ ಜೂನ್ನಲ್ಲಿ B.Sc(Honours) Economics ತರಗತಿಗಳು ಪ್ರಾರಂಭವಾಗಿತ್ತು ಎಂದು ತಿಳಿಸಿದ್ದಾರೆ.


ಐದು ವರ್ಷಗಳ ಹಿಂದೆ (4-10-2017)ರಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬೆಂಗಳೂರಿಗೆ ಬಂದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆಯಾದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪು ಎಂದಿರುವ ಸಿದ್ದರಾಮಯ್ಯ, ವಿಶ್ವಕಂಡ ಅಪ್ರತಿಮ ಆರ್ಥಿಕ ತಜ್ಞ ಡಾ.ಬಿಆರ್. ಅಂಬೇಡ್ಕರ್ ಅವರ 125ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ನೆನಪಿಗೆ ಅರ್ಥಪೂರ್ಣವಾದ ಸ್ಮಾರಕರೂಪದಲ್ಲಿ ಯೋಜನೆಯೊಂದನ್ನು ರೂಪಿಸಬೇಕೆಂಬ ನಮ್ಮ ಸರ್ಕಾರದ ಕನಸು ನನಸಾಗಿ ರೂಪುಗೊಂಡದ್ದು ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಎಂದು ಹೇಳಿದ್ದಾರೆ.


ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಸ್ಥಾಪನೆಗೆ 2017ರಲ್ಲಿಯೇ 43.45 ಎಕರೆ ಜಮೀನು ಮತ್ತು ಹೊಸ ಕಟ್ಟಡ ಸಹಿತ ಮೂಲಸೌಕರ್ಯ ನಿರ್ಮಾಣಕ್ಕೆ 350 ಕೋಟಿ ರೂಪಾಯಿ ಮಂಜೂರು ಮಾಡಿದ್ದ ನಮ್ಮ ಸರ್ಕಾರ ಬದ್ಧತೆಯಿಂದ ಈ ಯೋಜನೆಯನ್ನು ಸಾಕಾರಗೊಳಿಸಿತ್ತು ಎಂದಿರುವ ಸಿದ್ದರಾಮಯ್ಯ, ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ಕಟ್ಟಡದ ಶಂಕುಸ್ಥಾಪನೆ ಮಾಡಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ಈ ಕಟ್ಟಡವನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಿದ್ದು ನಮ್ಮ ಸರ್ಕಾರದ ಹೆಮ್ಮೆಯ ಸಾಧನೆ. ಜ್ಞಾನಭಾರತಿ ಕ್ಯಾಂಪಸ್ ನಲ್ಲಿಯೇ ಇದ್ದ ಕಟ್ಟಡದಲ್ಲಿಯೇ 2017ರ ಜೂನ್ ನಲ್ಲಿ B.Sc(Honours) Economics ತರಗತಿಗಳು ಪ್ರಾರಂಭವಾಗಿತ್ತು ಎಂದು ಬರೆದುಕೊಂಡಿದ್ದಾರೆ.

Join Whatsapp
Exit mobile version