ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹಾನಿ : ಉದ್ವಿಗ್ನ ಪರಿಸ್ಥಿತಿ

Prasthutha|

ಬಲ್ಲಿಯಾ : ಬಿಜೆಪಿ ಆಡಳಿತದ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸಿಕಂದರ್ ಪುರ ಪ್ರದೇಶದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯೊಂದಕ್ಕೆ ದುಷ್ಮರ್ಮಿಗಳು ಹಾನಿಗೊಳಿಸಿದ ಘಟನೆ ನಡೆದಿದೆ. 18 ವರ್ಷದ ಈ ಪ್ರತಿಮೆಯ ಕೈಯನ್ನು ಮುರಿದು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಕಿಯಾ ಗ್ರಾಮದ ಉದ್ಯಾನವನದಲ್ಲಿ ಸ್ಥಾಪಿಸಲಾದ ಪ್ರತಿಮೆಗೆ ಹಾನಿ ಮಾಡಿರುವುದು ಇಂದು ಮುಂಜಾನೆ ಕಂಡುಬಂದಿದೆ. ಎಂದು ಸಿಕಂದರ್ ಪುರ ಪೊಲೀಸ್ ವರಿಷ್ಠಾಧಿಕಾರಿ ಬಾಲೆಂಡು ಭೂಷಣ್ ಮಿಶ್ರಾ ಹೇಳಿದ್ದಾರೆ.

- Advertisement -

ಪ್ರತಿಮೆ 18 ವರ್ಷಗಳ ಹಿಂದೆ ಸ್ಥಾಪಿಸಲಾಗಿದ್ದು, ಹಾನಿಗೊಂಡಿರುವ ಪ್ರತಿಮೆಯನ್ನು ದುರಸ್ತಿಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಘಟನೆಯ ಸುದ್ದಿ ಕೇಳಿ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಆದರೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

- Advertisement -