Home ಟಾಪ್ ಸುದ್ದಿಗಳು ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹಾನಿ : ಉದ್ವಿಗ್ನ ಪರಿಸ್ಥಿತಿ

ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹಾನಿ : ಉದ್ವಿಗ್ನ ಪರಿಸ್ಥಿತಿ

ಬಲ್ಲಿಯಾ : ಬಿಜೆಪಿ ಆಡಳಿತದ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸಿಕಂದರ್ ಪುರ ಪ್ರದೇಶದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯೊಂದಕ್ಕೆ ದುಷ್ಮರ್ಮಿಗಳು ಹಾನಿಗೊಳಿಸಿದ ಘಟನೆ ನಡೆದಿದೆ. 18 ವರ್ಷದ ಈ ಪ್ರತಿಮೆಯ ಕೈಯನ್ನು ಮುರಿದು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಕಿಯಾ ಗ್ರಾಮದ ಉದ್ಯಾನವನದಲ್ಲಿ ಸ್ಥಾಪಿಸಲಾದ ಪ್ರತಿಮೆಗೆ ಹಾನಿ ಮಾಡಿರುವುದು ಇಂದು ಮುಂಜಾನೆ ಕಂಡುಬಂದಿದೆ. ಎಂದು ಸಿಕಂದರ್ ಪುರ ಪೊಲೀಸ್ ವರಿಷ್ಠಾಧಿಕಾರಿ ಬಾಲೆಂಡು ಭೂಷಣ್ ಮಿಶ್ರಾ ಹೇಳಿದ್ದಾರೆ.

ಪ್ರತಿಮೆ 18 ವರ್ಷಗಳ ಹಿಂದೆ ಸ್ಥಾಪಿಸಲಾಗಿದ್ದು, ಹಾನಿಗೊಂಡಿರುವ ಪ್ರತಿಮೆಯನ್ನು ದುರಸ್ತಿಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಘಟನೆಯ ಸುದ್ದಿ ಕೇಳಿ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಆದರೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

Join Whatsapp
Exit mobile version