Home ಟಾಪ್ ಸುದ್ದಿಗಳು ಉತ್ತರ ಪ್ರದೇಶ । ಅಂಬೇಡ್ಕರ್ ಜಯಂತಿಯಂದೇ ಪ್ರತಿಮೆ ಧ್ವಂಸ

ಉತ್ತರ ಪ್ರದೇಶ । ಅಂಬೇಡ್ಕರ್ ಜಯಂತಿಯಂದೇ ಪ್ರತಿಮೆ ಧ್ವಂಸ

ಲಕ್ನೋ: ದಲಿತ ಹೋರಾಟಗಾರ, ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದೇ ಉತ್ತರ ಪ್ರದೇಶದ ನೋಯ್ಡಾದಲ್ಲಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಮಧ್ಯೆ ಸ್ಥಳೀಯರ ನೆರವಿನೊಂದಿಗೆ ವಿರೂಪಗೊಂಡ ಪ್ರತಿಮೆಗೆ ಪರ್ಯಾಯವಾಗಿ ನೂತನ ಪ್ರತಿಮೆಯನ್ನು ಸ್ಥಾಪಿಸಲಾಗುವುದೆಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸದ್ಯ ಸ್ಥಳದಲ್ಲಿ ಪೊಲೀಸ್ ಪಡೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಮತ್ತು ಘಟನೆಯ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ವರದಿ ಆಧಾರದಲ್ಲಿ ಮುಂದಿನ ಕ್ರಮ ಜರುಗಿಸಲಾಗುವುದೆಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version