ಪ್ರವಾದಿ ನಿಂದನೆ ಹೇಳಿಕೆಯನ್ನು ಖಂಡಿಸಿದ ಅಮೇರಿಕಾ: ಧಾರ್ಮಿಕ ಹಕ್ಕುಗಳನ್ನು ಗೌರವಿಸುವಂತೆ ಭಾರತಕ್ಕೆ ಮನವಿ

Prasthutha: June 17, 2022

ವಾಷಿಂಗ್ಟನ್‌: ಪ್ರವಾದಿ ಪೈಗಂಬರ್‌ ಕುರಿತು ಸುದ್ದಿ ಮಾಧ್ಯಮದ ಚರ್ಚೆಯ ಮಧ್ಯೆ ಬಿಜೆಪಿ ನಾಯಕಿ‌ ನೂಒಉರ್ ಶರ್ಮಾ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಅಮೆರಿಕ ಖಂಡನೆ ವ್ಯಕ್ತಪಡಿಸಿದೆ.

ಬಿಜೆಪಿ ನಾಯಕಿಯ ವಿವಾದಿತ ಹೇಳಿಕೆಗೆ ಮುಸ್ಲಿಂ ರಾಷ್ಟ್ರಗಳಲ್ಲಿ ಬಹಳ ವಿರೋಧ ವ್ಯಕ್ತವಾಗಿತ್ತು ಮತ್ತು ಭಾರತದಲ್ಲಿ ಹಲವು ಪ್ರತಿಭಟನೆಗಳು ನಡೆದಿತ್ತು. ಇದಕ್ಕೆಲ್ಲಾ ಮುಖ್ಯ ಕಾರಣವಾದ ಬಿಜೆಪಿ ನಾಯಕಿ‌ ನೂಪುರ್ ಶರ್ಮಾಳ ಆಕ್ಷೇಪಾರ್ಹ ಹೇಳಿಕೆ ಖಂಡನೀಯವಾಗಿದೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಹೇಳಿದ್ದಾರೆ.


ನಾವು ಧಾರ್ಮಿಕ ಅಥವಾ ನಂಬಿಕೆಯ ಸ್ವಾತಂತ್ರ್ಯ ಸೇರಿದಂತೆ ಮಾನವ ಹಕ್ಕುಗಳ ಕಾಳಜಿಯ ಕುರಿತು ಉನ್ನತ ಮಟ್ಟದಲ್ಲಿ ಭಾರತ ಸರ್ಕಾರದೊಂದಿಗೆ ಚರ್ಚೆ ನಡೆಸಿದ್ದೇವೆ. ಮಾನವ ಹಕ್ಕುಗಳ ಗೌರವವನ್ನು ಉತ್ತೇಜಿಸಲು ನಾವು ಭಾರತವನ್ನು ಮನವಿ ಮಾಡುತ್ತೇವೆ ಎಂದಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!