ಅಮೆರಿಕದ ನ್ಯಾಶ್ವಿಲ್ಲೆ ನಗರದ ಖಾಸಗಿ ಕ್ರಿಶ್ಚಿಯನ್ ಶಾಲೆಯಲ್ಲಿ ದುಷ್ಕರ್ಮಿಗಳಿಂದ ನಡೆದ ಗುಂಡಿನ ದಾಳಿಯಲ್ಲಿ 3 ವಿದ್ಯಾರ್ಥಿಗಳು ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ.
ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣದ ಚಿಕಿತ್ಸೆಗಾಗಿ ಮನ್ರೋ ಕ್ಯಾರೆಲ್ ಜೂನಿಯರ್ ಮಕ್ಕಳ ಆಸ್ಪತ್ರೆಗೆ ಸಾಗಿಸಲಾಯಿತು. ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಘಟನಾ ಸ್ಥಳದಲ್ಲಿ ದಾಳಿಕೋರ ಮಹಿಳೆಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಈ ಘಟನೆಯ ನಂತರ, ಶಾಲೆಯಲ್ಲಿದ್ದ ಇತರ ವಿದ್ಯಾರ್ಥಿಗಳನ್ನು ಪೊಲೀಸ್ ರಕ್ಷಣೆಯಲ್ಲಿ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಯಿತು.
ಈ ಹಿಂದೆಯೂ ಇಂತಹ ದಾಳಿಗಳು ಅಮೆರಿಕದಲ್ಲಿ ನಡೆದಿವೆ. ಜನವರಿಯಲ್ಲಿ ಅಮೆರಿಕದ ಅಯೋವಾದಲ್ಲಿ ಶಾಲೆಯೊಂದರಲ್ಲಿ ಮನಬಂದಂತೆ ಗುಂಡಿನ ದಾಳಿ ನಡೆದಿತ್ತು. ಇದರಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಓರ್ವ ಶಿಕ್ಷಕ ಗಂಭೀರವಾಗಿ ಗಾಯಗೊಂಡಿದ್ದರು.