ವಾಷಿಂಗ್ಟನ್: ಮೊದಲ ಬಾರಿಗೆ ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಎರಡು ತಿಂಗಳ ನಂತರ ಮೃತಪಟ್ಟಿದ್ದಾರೆ ಎಂದು ಚಿಕಿತ್ಸೆ ನೀಡಿದ ಆಸ್ಪತ್ರೆ ತಿಳಿಸಿದೆ
ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಮೆರಿಕ ಮೇರಿಲ್ಯಾಂಡ್‍ನ 57 ವರ್ಷದ ಡೇವಿಡ್ ಬೆನೆಟ್‍ಗೆ ಜ.7ರಂದು ಹಂದಿ ಹೃದಯವನ್ನು ಅಳವಡಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆಯಾದ ಮೂರು ದಿನಗಳ ನಂತರ ರೋಗಿಯು ಚೇತರಿಸಿಕೊಂಡಿದ್ದರು. ಅವರಿಗೆ ಅಳವಡಿಸಲಾದ ಹೃದಯ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಮಾ.8 ರಂದು ವ್ಯಕ್ತಿ ಮೃತಪಟ್ಟಿದ್ದಾರೆ.
ಕೆಲವು ದಿನಗಳ ಹಿಂದೆ ಅವರ ಸ್ಥಿತಿ ಹದಗೆಡಲು ಪ್ರಾರಂಭಿಸಿತು. ವೈದ್ಯರು ಹೆಚ್ಚು ನಿಗಾವಹಿಸಿ ಚಿಕಿತ್ಸೆ ಮುಂದುವರಿಸಿದರಾದರೂ, ಅವರು ಚೇತರಿಸಿಕೊಳ್ಳುವುದಿಲ್ಲ ಎಂಬುದು ಸ್ಪಷ್ಟವಾಗಿತ್ತು. ನಂತರ ಅವರು ಮೃತಪಟ್ಟಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ, ಕಸಿ ಮಾಡಲಾದ ಹೃದಯವು ಯಾವುದೇ ತೊಂದರೆಯ ಲಕ್ಷಣಗಳಿಲ್ಲದೆ ಹಲವಾರು ವಾರಗಳವರೆಗೆ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.