►ICU ನಲ್ಲಿರುವ ಬಿಜೆಪಿಯನ್ನು ಎಚ್ಚರಿಸಲು ‘ಶಾ’ ಕದ್ದುಮುಚ್ಚಿ ಭೇಟಿ: ಕಾಂಗ್ರೆಸ್ ಲೇವಡಿ
ಬೆಂಗಳೂರು: ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೇಕಾಗಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಬೆಂಗಳೂರಿಗೆ ದಿಢೀರ್ ಆಗಿ ಆಗಮಿಸಿದ್ದಾರೆ, ವಿಮಾನ ನಿಲ್ದಾಣಜಕ್ಕೆ ಬಂದಿಳಿದ ಅವರನ್ನು ನಿನ್ನೆ ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬರಮಾಡಿಕೊಂಡಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ನಡೆಯುವ ಎರಡು ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕೇಂದ್ರ ಸಾಂಸ್ಕೃತಿಕ ಇಲಾಖೆ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ
ಅಮಿತ್ ಶಾ ಆಗಮನದ ಕುರಿತು ಲೇವಡಿ ಮಾಡಿರುವ ಕಾಂಗ್ರೆಸ್, ಕಾರ್ಯಕರ್ತರ ಆಕ್ರೋಶವನ್ನೂ ಎದುರಿಸುತ್ತಿರುವ ಬಿಜೆಪಿ ಸರ್ಕಾರ ICU ಸೇರಿರುವುದಕ್ಕೆ ಅಮಿತ್ ಶಾ ಅವರು ಆತಂಕದಲ್ಲಿ ಓಡೋಡಿ ಬರುತ್ತಿದ್ದಾರಂತೆ ಎಂದು ಹೇಳಿದೆ.
ಕೇಂದ್ರ ಗೃಹ ಸಚಿವರ ಭೇಟಿ ಕುರಿತು ಸರಣಿ ಟ್ವೀಟ್ ಮಾಡುತ್ತಿರುವ ಕಾಂಗ್ರೆಸ್ ಟ್ಚೀಟ್ ನಲ್ಲಿ ಟ್ವೀಟ್ನಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕದ ಧಿಡೀರ್ ಭೇಟಿ ಹಿಂದಿರುವ ಉದ್ದೇಶವೇನು?. ಕಾನೂನು ಅವ್ಯವಸ್ಥೆಯನ್ನ ಕಣ್ತುಂಬಿಕೊಳ್ಳುವುದಕ್ಕೋ?. ICU ನಲ್ಲಿರುವ ಬಿಜೆಪಿ ಕರ್ನಾಟಕದ ಕೊನೆಯ ದರ್ಶನ ಮಾಡುವುದಕ್ಕೋ? ಬಿಜೆಪಿಗೆ ಇನ್ನಷ್ಟು ‘ಶವ ರಾಜಕೀಯ’ದ ಟಾಸ್ಕ್ ಕೊಡುವುದಕ್ಕೋ?. ಕದ್ದುಮುಚ್ಚಿ ಆಗಮಿಸುತ್ತಿರುವುದರ ಹಿಂದಿನ ಅಜೆಂಡಾವೇನು? ಎಂದು ಪ್ರಶ್ನಿಸಿದೆ.