ನವದೆಹಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಗನನ್ನು ಸೋಲಿಸಲು ಅಮಿತ್ ಷಾ ಆಶೀರ್ವಾದ ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ರೋಚಕ ಹೇಳಿಕೆ ನೀಡಿದ್ದಾರೆ
ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದ ಈಶ್ವರಪ್ಪ ರೋಚಕ ಹೇಳಿಕೆ ನೀಡಿದ್ದಾರೆ.
ಇವತ್ತು ಅಮಿತ್ ಷಾ ಅವರ ಭೇಟಿಯಾಗಿದ್ದಿದ್ದರೆ ಸ್ಪರ್ಧೆಯಿಂದ ಹಿಂದೆ ಸರಿಯಲು ಹೇಳುತ್ತಾರೆ ಎಂಬ ಭಯವಿತ್ತು. ಆದರೆ ಅವರ ಭೇಟಿ ಆಗದೆ ಬರುವುದನ್ನು ನೋಡಿದರೆ ಶಿವಮೊಗ್ಗದಲ್ಲಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಲು ಅಣಿಯಾಗಿ ಎಂದು ಅವರು ನನ್ನನ್ನು ಆಶೀರ್ವದಿಸಿದಂತಿದೆ ಎಂದು ಅವರು ಹೇಳಿದ್ದಾರೆ.
ನಾನು ಪಕ್ಷದ ನಿಷ್ಟಾವಂತ ಕಾರ್ಯಕರ್ತ. ಈ ಹಿಂದೆ ವರಿಷ್ಟರು ಏನು ಹೇಳಿದರೋ ಅದನ್ನೆಲ್ಲ ಮಾಡಿದ್ದೇನೆ. ಈ ಸಲ ಅವರ ಮಾತನ್ನು ಉಲ್ಲಂಘಿಸುವುದು ಹೇಗೆ ಎಂಬ ಚಿಂತೆಯಲ್ಲಿದ್ದೆ. ಆದರೆ ನನ್ನ ಚಿಂತೆಯನ್ನು ಅಮಿತ್ ಷಾ ದೂರ ಮಾಡಿದ್ದಾರೆ. ರಾಘವೇಂದ್ರ ಅವರನ್ನು ಸೋಲಿಸಲು ಆಶೀರ್ವಾದ ಮಾಡಿದ್ದಾರೆ ಎಂಬುದು ನನ್ನ ನಂಬಿಕೆ ಎಂದು ಹೇಳಿದರು.