Home ಟಾಪ್ ಸುದ್ದಿಗಳು ಕೇರಳ | ನೆಹರೂ ಟ್ರೋಫಿ ದೋಣಿ ಸ್ಪರ್ಧೆಗೆ ಅಮಿತ್ ಶಾಗೆ ಆಹ್ವಾನ: ಕಾಂಗ್ರೆಸ್ ಆಕ್ರೋಶ

ಕೇರಳ | ನೆಹರೂ ಟ್ರೋಫಿ ದೋಣಿ ಸ್ಪರ್ಧೆಗೆ ಅಮಿತ್ ಶಾಗೆ ಆಹ್ವಾನ: ಕಾಂಗ್ರೆಸ್ ಆಕ್ರೋಶ

ತಿರುವನಂತಪುರ: ಓಣಂ ಹಬ್ಬದ ಪ್ರಯುಕ್ತ ಕೇರಳದಲ್ಲಿ ಪ್ರತಿ ವರ್ಷಆಯೋಜನೆಯಾಗುತ್ತಿರುವ ನೆಹರೂ ಟ್ರೋಫಿ ದೋಣಿ ಸ್ಪರ್ಧೆಗೆ ಈ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೇರಳ ಸರ್ಕಾರವು ಆಹ್ವಾನ ನೀಡಿದೆ.ಇದು ವಿರೋಧ ಪಕ್ಷ ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ.


ಅಮಿತ್ ಶಾ ಅವರನ್ನು ಆಹ್ವಾನಿಸಲು ಲಾವ್ಲಿನ್ ಅಥವಾ ಚಿನ್ನ ಹಗರಣ ಕಾರಣವೇ ಎಂಬುದನ್ನು ಮುಖ್ಯಮಂತ್ರಿ ಸ್ಪಷ್ಟಪಡಿಸಬೇಕು ಎಂದು ಕೇರಳದ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ವಾಗ್ದಾಳಿ ನಡೆಸಿದ್ದಾರೆ.


ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಕೇರಳ ಸರ್ಕಾರವು, ದಕ್ಷಿಣದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅಮಿತ್ ಶಾ ಅವರನ್ನು ಆಹ್ವಾನಿಸಲಾಗಿದೆ. ಅವರೆಲ್ಲರೂ ಸೆಪ್ಟೆಂಬರ್ 3ರಂದು ನಡೆಯಲಿರುವ 30ನೇ ದಕ್ಷಿಣ ವಲಯ ಕೌನ್ಸಿಲ್ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ತಿಳಿಸಿದೆ. ಆಲಪ್ಪುಳದ ಪುನ್ನಮಡ ಹಿನ್ನೀರಿನಲ್ಲಿ ವರ್ಣರಂಜಿತ ದೋಣಿ ಸ್ಪರ್ಧೆಯು ಸೆಪ್ಟೆಂಬರ್ 4ರಂದು ನಡೆಯಲಿದೆ ಎಂದು ಹೇಳಿದೆ.

Join Whatsapp
Exit mobile version