ಅಮಿತ್ ಶಾ, ಮೋದಿ ಯಾವ ಮುಖ ಹೊತ್ತುಕೊಂಡು ಕರ್ನಾಟಕಕ್ಕೆ ಬರುತ್ತಿದ್ದಾರೆ: ಸಿದ್ದರಾಮಯ್ಯ

Prasthutha|

►ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

- Advertisement -

ಬೆಂಗಳೂರು: ‘ಮೋದಿ, ಅಮಿತ್ ಶಾ ಕರ್ನಾಟಕವನ್ನು ದ್ವೇಷಿಸುತ್ತಾರೆ. ರಾಜ್ಯದ ರೈತರನ್ನು ದ್ವೇಷಿಸುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.


ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವನ್ನು ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಮಂಗಳವಾರ ನಡೆದ ಧರಣಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

- Advertisement -


‘ಕೇಂದ್ರಕ್ಕೆ ಮನವಿ ಕೊಟ್ಟು ಏಳು ತಿಂಗಳಾಯಿತು. ಇನ್ನೂ ಪರಿಹಾರ ಬಿಡುಗಡೆ ಮಾಡಿಲ್ಲ. ಅಮಿತ್ ಶಾ, ಮೋದಿ ಯಾವ ಮುಖ ಹೊತ್ತುಕೊಂಡು ಕರ್ನಾಟಕಕ್ಕೆ ಬರುತ್ತಿದ್ದಾರೆ. ಅವರಿಗೆ ಯಾವುದೇ ನೈತಿಕತೆ ಇಲ್ಲ ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದೆ. ಇದನ್ನು ಖಂಡಿಸಿ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ’ ಎಂದರು.

Join Whatsapp