ಹಿಂದಿ ಭಾಷೆಯಲ್ಲಿ ವೈದ್ಯಕೀಯ ಶಿಕ್ಷಣ: ಪಠ್ಯ ಬಿಡುಗಡೆಗೊಳಿಸಿದ ಅಮಿತ್ ಶಾ!

Prasthutha|

ಭೋಪಾಲ್‌: ಹಿಂದಿ ಭಾಷೆಯಲ್ಲಿ ವೈದ್ಯಕೀಯ ಶಿಕ್ಷಣ ನೀಡುವ ಮಹಾತ್ವಾಕಾಂಕ್ಷಿ ಯೋಜನೆಯನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರ್ಕಾರವು ಮೊದಲ ಹೆಜ್ಜೆ ಇಟ್ಟಿದೆ.

- Advertisement -

ವೈದ್ಯಕೀಯ ಶಿಕ್ಷಣದ ಪಠ್ಯಗಳಾದ , ಮೆಡಿಕಲ್‌ ಬಯೋಕೆಮಿಸ್ಟ್ರಿ, ಅನಾಟಮಿ ಮತ್ತು ಮೆಡಿಕಲ್‌ ಸೈಕಾಲಜಿ ವಿಷಯಗಳ ಪುಸ್ತಕಗಳನ್ನು ಹಿಂದಿಯಲ್ಲೇ ಸಿದ್ಧಪಡಿಸಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿಡುಗಡೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ‘ಇದೊಂದು ಐತಿಹಾಸಿಕ ದಿನ. ಹಿಂದಿಯಲ್ಲಿ ಎಂಬಿಬಿಎಸ್‌ ಕೋರ್ಸ್‌ ಆರಂಭಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಮಧ್ಯಪ್ರದೇಶ ಭಾಜನವಾಗಿದೆ’ ಎಂದಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ವೇದಿಕೆಗಳಲ್ಲಿ ಹಿಂದಿಯಲ್ಲೇ ಮಾತನಾಡುತ್ತಾರೆ. ಆ ಮೂಲಕ ಹಿಂದಿಯ ಮಹತ್ವವನ್ನು ವಿಶ್ವಕ್ಕೆ ಸಾರುತ್ತಿದ್ದಾರೆ. ಪ್ರಧಾನಿಯವರ ಈ ನಡೆಯಿಂದಾಗಿ ದೇಶದ ಯುವಕರ ಆತ್ಮವಿಶ್ವಾಸ ಇಮ್ಮಡಿಗೊಳ್ಳಲಿದೆ’ ಎಂದು ತಿಳಿಸಿದ್ದಾರೆ.



Join Whatsapp