ಗಡಿ ವಿವಾದ| ಡಿ.14ಕ್ಕೆ ಉಭಯ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಿರುವ ಶಾ

Prasthutha|

ಹೊಸದಿಲ್ಲಿ: ಕರ್ನಾಟಕ –ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಿ.14ರಂದು ಸಭೆ ನಡೆಸಲಿದ್ದಾರೆ.

ಗಡಿ ವಿವಾದ ಕುರಿತಂತೆ ಅಹವಾಲು ಹೇಳಿಕೊಳ್ಳಲು ಬಂದಿದ್ದ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ಮೈತ್ರಿಕೂಟದ ನಿಯೋಗ ಶಾ ಅವರನ್ನು ಭೇಟಿಯಾದ ಬಳಿಕ, ಎನ್‌ಸಿಪಿ ನಾಯಕ ಅಮೋಲ್ ಕೊಲ್ಹೆ ಈ ವಿಷಯ ತಿಳಿಸಿದ್ದಾರೆ.

- Advertisement -

‘ಶಾ ಅವರು ನಮ್ಮ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿದರು. ಸೌಹಾರ್ದ ಪರಿಹಾರಕ್ಕಾಗಿ 14ರಂದು ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಲಾಗುವುದು ಎಂಬುದಾಗಿ ತಿಳಿಸಿದರು’ ಎಂದು ಕೊಲ್ಹೆ ಹೇಳಿದರು.

ರಾಜ್ಯಗಳ ಪುನಾರಚನೆ ಬಳಿಕ ಬೆಳಗಾವಿ ಸೇರಿ ಕರ್ನಾಟಕದ 865 ಗ್ರಾಮಗಳು ನಮಗೆ ಸೇರಬೇಕು ಎಂದು ಮಹಾರಾಷ್ಟ್ರ ತಗಾದೆ ತೆಗೆದಿದೆ. ಆದರೆ, ‘ಗಡಿವಿವಾದ ಮುಗಿದ ಅಧ್ಯಾಯ’ ಎಂದು ಕರ್ನಾಟಕ ಹೇಳುತ್ತ ಬಂದಿದೆ.

- Advertisement -