ನಿಜ್ಜರ್ ಹತ್ಯೆಯಲ್ಲಿ ಅಮಿತ್ ಶಾ ಕೈವಾಡ: ಕೆನಡಾ ಆರೋಪ ಕಳವಳಕಾರಿ ಎಂದ ಅಮೆರಿಕಾ

Prasthutha|

ವಾಷಿಂಗ್ಟನ್: ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ವಿರುದ್ಧ ಸಂಚು ರೂಪಿಸುವಲ್ಲಿ ಭಾರತದ ಗೃಹ ಸಚಿವ ಅಮಿತ್ ಶಾ ಅವರ ಕೈವಾಡವಿದೆ ಎನ್ನುವ ಕೆನಡಾ ಸರ್ಕಾರದ ಆರೋಪ ‘ಕಳವಳಕಾರಿ’ಯಾಗಿದೆ ಎಂದು ಅಮೆರಿಕಾ ಪ್ರತಿಕ್ರಿಯಿಸಿದೆ.

- Advertisement -


ಕೆನಡಾ ಸರ್ಕಾರ ಮಾಡಿರುವ ಆರೋಪಗಳು ಕಳವಳಕಾರಿಯಾಗಿವೆ. ಈ ಆರೋಪಗಳ ಬಗ್ಗೆ ಕೆನಡಾ ಸರ್ಕಾರದ ಜೊತೆ ಮಾತುಕತೆ ನಡೆಸುತ್ತೇವೆ’ ಎಂದು ಅಮೆರಿಕಾದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಅವರು ಹೇಳಿದ್ದಾರೆ.


ಕೆನಡಾದಲ್ಲಿರುವ ಸಿಖ್ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ಕೈಗೊಳ್ಳಲು, ಬೆದರಿಕೆ ಹಾಕಲು ಮತ್ತು ಗುಪ್ತಚರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಅಮಿತ್ ಶಾ ಆದೇಶಿಸಿದ್ದರು ಎಂದು ಕೆನಡಾದ ವಿದೇಶಾಂಗ ವ್ಯವಹಾರಗಳ ಉಪ ಸಚಿವ ಡೇವಿಡ್ ಮಾರಿಸನ್ ಅವರು, ಸಂಸತ್ ಸದಸ್ಯರನ್ನು ಒಳಗೊಂಡ ರಾಷ್ಟ್ರೀಯ ಭದ್ರತಾ ಸಮಿತಿಗೆ ಈ ವಿಷಯ ತಿಳಿಸಿದ್ದರು.




Join Whatsapp