ಪ್ರಜ್ವಲ್‌ ಕೇಸ್: ಮಹಿಳೆಯರ ಮೇಲಿನ ದೌರ್ಜನ್ಯ ಸಹಿಸಲ್ಲ ಎಂದ ಅಮಿತ್‌ ಶಾ

Prasthutha|

- Advertisement -

ನವದೆಹಲಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ‘ಅಶ್ಲೀಲ ವಿಡಿಯೋ’ ಪ್ರಕರಣ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ‌ ಪ್ರತಿಕ್ರಿಯೆ ನೀಡಿದ್ದಾರೆ.

ನಾವು ತನಿಖೆಯ ಪರವಾಗಿದ್ದೇವೆ, ತನಿಖೆ ನಡೆಯಲಿ. ಇದು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯ, ಹೀಗಾಗಿ ನಾವು ಈ ಬಗ್ಗೆ ಕ್ರಮ ಕೈಗೊಳ್ಳಲು ಆಗಲ್ಲ. ನಮ್ಮ ಮೈತ್ರಿ ಪಕ್ಷ ಜೆಡಿಎಸ್ ಕೂಡ ಇದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಇಂದು ಅವರ ಕೋರ್ ಕಮಿಟಿ ಸಭೆ ಇದ್ದು, ಕ್ರಮಕೈಗೊಳ್ಳಲಿದ್ದಾರೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ.



Join Whatsapp