ಚಾಮರಾಜನಗರ: ಗೃಹ ಸಚಿವ ಅಮಿತ್ ಶಾ ಓರ್ವ ಗೂಂಡಾ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಹನೂರು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಗುಜರಾತ್ ನಲ್ಲಿ ನರಮೇಧ ಮಾಡಿದವರು ಯಾರು? ಇಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕ್ರಿಮಿನಲ್ ಚಟುವಟಿಕೆಯುಳ್ಳ ಇಂತಹವರನ್ನು ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ
2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು, ಅದು ಆಗಲಿಲ್ಲ. ಈಗ ನಿರೋದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ ಮಾಡೋದು ಕೇಂದ್ರ ಸರ್ಕಾರದ ಹೊಣೆ ಅಲ್ಲ ಎಂದು ಹೇಳ್ತಿದ್ದಾರೆ. ಕಪ್ಪು ಹಣ ವಾಪಸ್ ತರುತ್ತೇವೆ ಎಂದಿದ್ದರು, ತಂದ್ರಾ? ಸ್ವಿಸ್ ಬ್ಯಾಂಕ್ನಲ್ಲಿ ಯಾರ ಖಾತೆಯಿದೆ ಎಂದು ಪಟ್ಟಿ ಕೂಡ ರಿಲೀಸ್ ಮಾಡಲಿಲ್ಲ ಎಂದರು.