Home ಟಾಪ್ ಸುದ್ದಿಗಳು ಅಮಿತ್ ಶಾ ವಿರುದ್ಧ ಟಿಎಂಸಿ ಮುಖಂಡ ಅಭಿಷೇಕ್ ಮಾನನಷ್ಟ ದಾವೆ : ಸಮನ್ಸ್ ಜಾರಿ

ಅಮಿತ್ ಶಾ ವಿರುದ್ಧ ಟಿಎಂಸಿ ಮುಖಂಡ ಅಭಿಷೇಕ್ ಮಾನನಷ್ಟ ದಾವೆ : ಸಮನ್ಸ್ ಜಾರಿ


ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಪಕ್ಷದ ಮುಖಂಡ ಅಭಿಷೇಕ್ ಬ್ಯಾನರ್ಜಿ ಅವರು ಸಲ್ಲಿಸಿದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯವು ಕೇಂದ್ರ ಗೃಹ ಸಚಿವ ಅಮಿತ್ ಷಾ ಸಮನ್ಸ್ ಜಾರಿಗೊಳಿಸಿದೆ. ಫೆಬ್ರವರಿ 22 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ.


ಅಗಸ್ಟ್ 11ರಂದು ‘ಯುವ ಸ್ವಾಭಿಮಾನ್ ಸಮಾವೇಶ’ದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದರು. 3 ಲಕ್ಷ 59ಸಾವಿರ ಕೋಟಿ ಸಿಂಡಿಕೇಟಿಗೆ ಉಡುಗೊರೆಯಾಗಿ ನೀಡಲಾಗಿದೆ ಎಂದು ಅಮಿತ್ ಶಾ ಆರೋಪಿಸಿದ್ದನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನು ವಿರೋಧಿಸಿದ ಅಭಿಷೇಕ್ ಬ್ಯಾನರ್ಜಿ, ಅಮಿತ್ ಶಾ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಿದ್ದಾರೆ.

Join Whatsapp
Exit mobile version