ಅಮ್ಮುಂಜೆ:  ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ 25ಕ್ಕೂ ಹೆಚ್ಚು ಮಂದಿ SDPI ಗೆ ಸೇರ್ಪಡೆ

Prasthutha|

         ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕರಿಯಂಗಳ ಅಮ್ಮುಂಜೆ ಗ್ರಾಮ ಸಮಿತಿಯ ವತಿಯಿಂದ ಅಮ್ಮುಂಜೆಯಲ್ಲಿ  ಕಾರ್ಯಕರ್ತರ ಸಮ್ಮಿಲನ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮವು ಗ್ರಾಮ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಎಮ್ ಪಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

- Advertisement -

         ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ  ಆಗಮಿಸಿದ ಎಸ್ ಡಿ ಪಿ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮೊಹಮ್ಮದ್ ತುಂಬೆ  ಮಾತನಾಡಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಂಬ ಪಕ್ಷವು ಭಾರತದ ಸಂವಿಧಾನದ ಆಶಯದೊಂದಿಗೆ ಕಾರ್ಯಾಚರಿಸುತ್ತಿದ್ದು ಭಾರತದ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿಯೊಂದಿಗೆ ಹಸಿವು ಮುಕ್ತ ಸ್ವಾತಂತ್ರ್ಯ ಮತ್ತು ಭಯ ಮುಕ್ತ ಸ್ವಾತಂತ್ರ್ಯದ ಭಾರತವನ್ನು ಕಟ್ಟಲು ಪಣತೊಟ್ಟಂತಹ ಪಕ್ಷವಾಗಿದೆ ಎಂದರು.

ಅವರು ಎಸ್ ಡಿ ಪಿ ಐ ಹಾಗೂ ಪ್ರಸಕ್ತ ಸನ್ನಿವೇಶದಲ್ಲಿ ಪಕ್ಷದ ಅನಿವಾರ್ಯತೆ ಬಗ್ಗೆ ಎಳೆ ಎಳೆಯಾಗಿ ವಿವರಿಸಿ ಪಕ್ಷದ ತತ್ವ ಸಿದ್ಧಾಂತವನ್ನು ಸವಿಸ್ತಾರವಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿಕೊಂಡು 25 ಮಂದಿ  ಪಕ್ಷಕ್ಕೆ ಸೇರ್ಪಡೆಯಾದರು.

- Advertisement -

          ಈ ವೇಳೆ ಜಿಲ್ಲಾ ಸಮಿತಿ ಸದಸ್ಯ ಯೂಸುಫ್ ಆಲಡ್ಕ ಪ್ರಸ್ತಾವಿಕವಾಗಿ ಮಾತನಾಡಿದರು. ಬಂಟ್ವಾಳ  ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಶಾಹುಲ್ ಹಮೀದ್ ಎಸ್ ಎಚ್ ಸಮಾರೋಪ ಮಾತುಗಳನ್ನಾಡಿದರು.  ಬಂಟ್ವಾಳ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಅನ್ವರ್ ಬಡಕಬೈಲ್  ಸ್ವಾಗತಿಸಿ, ಸಂಗಬೆಟ್ಟು ಬ್ಲಾಕ್ ಕಾರ್ಯದರ್ಶಿ ಹದಿಯತುಲ್ಲಾ ಕಲಾಯಿ ಉಪಸ್ಥಿತರಿದ್ದರು, ಅಝರ್ ಕಲಾಯಿ  ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.

Join Whatsapp