ಕಾರಿನಲ್ಲಿ ಆಕಸ್ಮಿಕ ಬೆಂಕಿ ಶಂಕೆ: ಖಾಸಗಿ ಕಂಪನಿ ಉದ್ಯೋಗಿ ಸಾವು

Prasthutha|

ಬೆಂಗಳೂರು: ನೈಸ್ ರಸ್ತೆಯ ಚನ್ನಸಂದ್ರ ಬ್ರಿಡ್ಜ್ ಬಳಿ ಖಾಸಗಿ ಕಂಪನಿಯೊಂದರ ಉದ್ಯೋಗಿಯೊಬ್ಬರು ಕಾರು ಸಹಿತ ಸುಟ್ಟು ಕರಕಲಾಗಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

- Advertisement -

ನೈಸ್ ರಸ್ತೆಯ ಚನ್ನಸಂದ್ರ ಬ್ರಿಡ್ಜ್ ಬಳಿ ಸ್ಯಾಂಟ್ರೋ ಕಾರು ಸಮೇತ ಖಾಸಗಿ ಕಂಪನಿಯೊಂದರ ಉದ್ಯೋಗಿ
ಕೋಲಾರ ಮೂಲದ ದರ್ಶನ(40) ಸುಟ್ಟು ಕರಕಲಾಗಿದ್ದಾರೆ.

ಉತ್ತರಹಳ್ಳಿಯಲ್ಲಿ ವಾಸವಾಗಿರುವ ಮೃತ ದರ್ಶನ್ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ತುಮಕೂರು ರಸ್ತೆ ಬಳಿ ಸಂಬಂಧಿಕರೊಬ್ಬರ ಮನೆಯ ಕಾರ್ಯಕ್ರಮಕ್ಕೆ ಹೋಗಿ ಬರುವುದಾಗಿ ಹೇಳಿ ಸಂಜೆ ಮನೆಯಿಂದ ಕಾರಿನಲ್ಲಿ ತೆರಳಿದ್ದರು.

- Advertisement -

ರಾತ್ರಿ 9.50ರ ಸುಮಾರಿಗೆ ದರ್ಶನ್ ಇದ್ದ ಕಾರು ಟೋಲ್ ನಿಂದ ಹೊರಬಂದಿರುವುದು ಕಂಡುಬಂದಿದ್ದು ಬಳಿಕ ಕಾರು ಚನ್ನಸಂದ್ರ ಬ್ರಿಡ್ಜ್ ಬಳಿ ಬರುತ್ತಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಸ್ತೆಯ ಎಡ ಬದಿಗೆ ಕಾರು ನಿಲುಗಡೆಯಾಗಿದ್ದು, ಸಂಪೂರ್ಣ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಕಾರು ಹಾಗೂ ಮೃತದೇಹ ಪತ್ತೆಯಾಗಿದೆ.

ಕೆಂಗೇರಿ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp