ಮಂಗಳೂರು: ದ.ಕ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೆ ಮೇ 20ರ ವರೆಗೆ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಸೋಮವಾರ ಬೆಳಗ್ಗಿನ ಜಾವ ಗುಡುಗು ಸಹಿತ ಸಾಧಾರಣ ಮಳೆ ಯಾಗಿತ್ತು.
ದ.ಕ, ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 20ರ ವರೆಗೆ ಗಾಳಿ, ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.