ಕೊಡಗು: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿರುವ ಕೃತ್ಯ ಅಕ್ಷಮ್ಯ ಹಾಗೂ ಖಂಡನಾರ್ಹ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಿ ದಾಳಿ ಮಾಡುವ ಮೂಲಕ ಭೀತಿಯ ವಾತಾವರಣ ಸೃಷ್ಟಿ ಮಾಡಿದ್ದಾರೆ. ಹಲ್ಲೆ ಮಾಡುವ ರೀತಿಯಲ್ಲಿ ವರ್ತಿಸಿ ಪ್ರಕ್ಷುಬ್ದ ವಾತಾವರಣವನ್ನು ಸೃಷ್ಟಿಸಿದ್ದಾರೆ. ಈ ರೀತಿ ಮುತ್ತಿಗೆ ಹಾಕಲು ಗೃಹ ಇಲಾಖೆ ಕುಮ್ಮಕ್ಕು ನೀಡಿದಂತೆ ಭಾಸವಾಗುತ್ತಿದೆ ಎಂದು ಅವರು ಸಂಶಯ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೆ ರಕ್ಷಣೆ ವ್ಯವಸ್ಥೆ ಮಾಡಲಿಲ್ಲ. ಮುತ್ತಿಗೆ ಹಾಕಿದವರನ್ನು ಚದುರಿಸುವ ಕೆಲಸವನ್ನೂ ಮಾಡಲಿಲ್ಲ. ಒಂದು ಕಡೆಯಲ್ಲಿ ಘಟನೆ ನಡೆದಾಗಲೇ ಪೊಲೀಸರು ಎಚ್ಚರಗೊಳ್ಳಬೇಕಿತ್ತು. ಇದು ಪೊಲೀಸ್ ಇಲಾಖೆಯ ವೈಫಲ್ಯವಾಗಿದೆ. ಮಾಜಿ ಮುಖ್ಯಮಂತ್ರಿಯೊಬ್ಬರಿಗೆ ರಕ್ಷಣೆ ನೀಡಲು ವಿಫಲವಾಗಿರುವುದಕ್ಕೆ ಗೃಹ ಲಾಖೆ ನೇರ ಹೊಣೆ ಹೊತ್ತು, ಗೃಹ ಸಚಿವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.