ಬಿಜೆಪಿ ಕಾರ್ಯಕರ್ತೆಯರ ಬಗ್ಗೆ ಆಕ್ಷೇಪಾರ್ಹ ಪದಬಳಕೆ: ಸಂಜಯ್ ರಾವತ್ ವಿರುದ್ಧ ಎಫ್.ಐ.ಆರ್

Prasthutha|

ನವದೆಹಲಿ: ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಬಗ್ಗೆ ಆಕ್ಷೇಪಾರ್ಹ ಪದಬಳಕೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶಿವಸೇನಾ ಸಂಸದ ಸಂಜಯ್ ರಾವತ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಶಿವಸೇನಾ ಸಂಸದ ಸಂಸದ ಸಂಜಯ್ ರಾವತ್ ವಿರುದ್ಧ ಐಪಿಸಿ ಸೆಕ್ಷನ್ 509, 500 ರ ಅಡಿಯಲ್ಲಿ ದೆಹಲಿಯ ಮಂಡವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಂಜಯ್ ರಾವತ್, ನನ್ನ ವಿರುದ್ಧ ದೆಹಲಿಯಲ್ಲಿ ದಾಖಲಾಗಿರುವ ಎಫ್.ಐ.ಆರ್ ರಾಜಕೀಯ ಪ್ರೇರಿತ ಮತ್ತು ಧ್ವನಿಯನ್ನು ಹತ್ತಿಕ್ಕುವ ಷಡ್ಯಂತರದ ಮುಂದುವರಿದ ಭಾಗವಾಗಿದೆ ಎಂದು ತಿಳಿಸಿದರು.

- Advertisement -

ಸಿಬಿಐ, ಐಟಿ, ಈಡಿ ದಾಳಿಯ ಮೂಲಕ ನನ್ನನ್ನು ಹಣೆಯಲು ಸಾಧ್ಯವಿಲ್ಲದ ಹಿನ್ನೆಲೆಯಲ್ಲಿ ಹತಾಶರಾಗಿ ಈ ರೀತಿಯ ಕೃತ್ಯಕ್ಕೆ ಇಳಿಯಲಾಗಿದೆ. ಸಂಸದನಾದ ನನ್ನ ವಿರುದ್ಧ ಈ ರೀತಿಯ ಸುಳ್ಳು ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.

Join Whatsapp